HomeLatest NewsBREAKING: ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನಕ್ಕೆ ಸಿಎಂ ಸಿದ್ಧರಾಮಯ್ಯ ಸಂತಾಪ

BREAKING: ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನಕ್ಕೆ ಸಿಎಂ ಸಿದ್ಧರಾಮಯ್ಯ ಸಂತಾಪ

ಬೆಂಗಳೂರು: ಮಾಜಿ ಸಚಿವ, ಶತಾಯುಷಿ ಡಾ.ಭೀಮಣ್ಣ ಖಂಡ್ರೆ ನಿಧನಕ್ಕೆ ಸಿಎಂ ಸಿದ್ಧರಾಮಯ್ಯ ಸಂತಾಪ ಸೂಚಿಸಿದ್ದಾರೆ.

ಮಾಜಿ‌ ಸಚಿವರು, ನಾಡಿನ ಹಿರಿಯ ರಾಜಕಾರಣಿಗಳು ಆದ ಭೀಮಣ್ಣ ಖಂಡ್ರೆಯವರ ನಿಧನದಿಂದ ದುಃಖಿತನಾಗಿದ್ದೇನೆ. ಶರಣ ಚಿಂತನೆಗಳ ನೆರಳಂತೆ ಬಾಳಿದ ಧೀಮಂತ ನಾಯಕನ ನಿಧನದಿಂದ ನಾಡಿಗೆ ತುಂಬಲಾರದ ನಷ್ಟವಾಗಿದೆ ಎಂದು ತಿಳಿಸಿದ್ದಾರೆ.

ಮಹಾತ್ಮಗಾಂಧಿಯವರ ನಾಯಕತ್ವದಲ್ಲಿ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿದ್ದ ಭೀಮಣ್ಣ ಖಂಡ್ರೆಯವರು ಬಳಿಕ ಕರ್ನಾಟಕ ಏಕೀಕರಣ ಚಳವಳಿಯಲ್ಲೂ ಮುಂಚೂಣಿಯಲ್ಲಿ ಗುರುತಿಸಿಕೊಂಡವರು. ಬೀದರ್ ಜಿಲ್ಲೆಯನ್ನು ಕರ್ನಾಟಕದಲ್ಲೇ ಉಳಿಸಿಕೊಳ್ಳಲು ಟೊಂಕಕಟ್ಟಿ ನಿಂತು, ಆ ಪ್ರಯತ್ನದಲ್ಲಿ ಕೂಡ ಸಫಲರಾದ ಹುಟ್ಟು ಹೋರಾಟಗಾರ. ಭೀಮಣ್ಣ ಖಂಡ್ರೆಯವರ ಬದುಕಿನ ಹೆಜ್ಜೆಗಳು ಈ ಮಣ್ಣಿನಲ್ಲಿ ಚಿರಸ್ಥಾಯಿ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬದುಕು ಕೊಟ್ಟ ಎಲ್ಲಾ ಅವಕಾಶಗಳನ್ನು ಸದ್ಬಳಕೆ ಮಾಡಿಕೊಂಡು ಸಮಾಜಕ್ಕಾಗಿ ದುಡಿದ ಸಾರ್ಥಕ ಜೀವಕ್ಕೆ ಅಂತಿಮ ನಮನಗಳು. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬ ಸದಸ್ಯರು ಹಾಗೂ ಅಪಾರ ಅಭಿಮಾನಿ ಬಳಗಕ್ಕೆ ಈ ನೋವು ಭರಿಸುವ ಶಕ್ತಿ ಸಿಗಲಿ‌ ಎಂದು ಪ್ರಾರ್ಥಿಸುತ್ತೇನೆ ಎಂದು ಸಿಎಂ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular