ನವದೆಹಲಿ: ದೀಪಾವಳಿಗೆ ಜಿಎಸ್‌ಟಿ ಸಂಬಂಧ ದೊಡ್ಡ ಗಿಫ್ಟ್ ಕೊಡಲಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ದೆಹಲಿಯ ಕೆಂಪುಕೋಟೆಯ ಮೇಲೆ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಹಲವು ವಸ್ತುಗಳ ಮೇಲಿನ ತೆರಿಗೆ ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಲಿದೆ. ಇದರಿಂದ ಹಲವು ಸರಕುಗಳ ಮೇಲಿನ ದರ ಕಡಿಮೆಯಾಗಲಿದೆ. ಜಿಎಸ್‌ಟಿ ತಿದ್ದುಪಡಿಯಿಂದ ಮಧ್ಯಮ ವರ್ಗದ ಜನರಿಗೆ ಅನುಕೂಲವಾಗುತ್ತದೆ. ದೀಪಾವಳಿಗೆ ಜಿಎಸ್‌ಟಿ ಸಂಬಂಧ ದೊಡ್ಡ ಗಿಫ್ಟ್ ನೀಡಲಿದ್ದೇವೆ. ಹಲವು ವಸ್ತುಗಳ ಮೇಲಿನ ತೆರಿಗೆ ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಲಿದೆ ಎಂದು ಹೇಳಿದ್ದಾರೆ.
ಜನರಿಗೆ ತೆರಿಗೆ ಹೊರೆ ಬಾರಿ ಪ್ರಮಾಣದಲ್ಲಿ ಕಡಿಮೆಯಾಗಲಿದೆ. ಜಿಎಸ್‌ಟಿ ಕ್ರಾಂತಿಕಾರಕ ಬದಲಾವಣೆಯಿಂದ ಮಧ್ಯಮ ವರ್ಗದ ಜನರ ಜೀವನಮಟ್ಟ ಸುಧಾರಣೆಯಾಗಲಿದೆ ಎಂದು ತಿಳಿಸಿದ್ದಾರೆ.
ಯುವ ಜನತೆಗೆ ಪ್ರಧಾನಿ ಮೋದಿ ದೊಡ್ಡ ಉಡುಗೊರೆ ಘೋಷಿಸಿದ್ದಾರೆ. ಯುವಕರಿಗೆ ಈ ವರ್ಷ ದೊಡ್ಡ ಪ್ರಮಾಣದಲ್ಲಿ ಉದ್ಯೋಗ ಸೃಷ್ಟಿಯಾಗಲಿದೆ. ವಿಕಸಿತ ಭಾರತ ರೋಜ್ಗಾರ್ ಯೋಜನೆ ಇಂದಿನಿಂದಲೇ ಜಾರಿಯಾಗಲಿದೆ ಎಂದು ಘೋಷಿಸಿದ್ದಾರೆ.