BREAKING: ಕಲ್ಯಾಣ ಕರ್ನಾಟಕದಲ್ಲಿ ಶಿಕ್ಷಣ ಗುಣಮಟ್ಟ ಸುಧಾರಣೆಗೆ 14 ಹೊಸ ಶಿಕ್ಷಣ ಕ್ಷೇತ್ರ ಸೃಜಿಸಲು ಪ್ರಿಯಾಂಕ್ ಖರ್ಗೆ ಪತ್ರ

ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಶಿಕ್ಷಣ ಗುಣಮಟ್ಟ ಸುಧಾರಣೆಗಾಗಿ 14 ಹೊಸ ಶಿಕ್ಷಣ ಕ್ಷೇತ್ರಗಳನ್ನು ಸೃಜಿಸಲು ಕ್ರಮ ಕೈಗೊಳ್ಳುವಂತೆ ಕೋರಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬರೆದಿದ್ದಾರೆ.

ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ 2024-25ನೇ ಶೈಕ್ಷಣಿಕ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತಿ ಕಡಿಮೆ ಫಲಿತಾಂಶ ಬಂದಿರುವ ಹಿನ್ನೆಲೆಯಲ್ಲಿ, ಶೈಕ್ಷಣಿಕ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಸಲುವಾಗಿ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 14 ಹೊಸ ಶಿಕ್ಷಣ ಕ್ಷೇತ್ರಗಳನ್ನು ಸೃಜಿಸಲು ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಲಾಗಿದೆ.

ಬೀದರ್ – ಚಿಟಗುಪ್ಪ ಮತ್ತು ಕಮಲನಗರ

ಕಲಬುರಗಿ – ಕಾಳಗಿ, ಕಮಲಪುರ ಮತ್ತು ಯಡ್ರಾಮಿ

ಯಾದಗಿರಿ – ಗುರಮಿಠಕಲ್, ಹುಣಸಗಿ

ರಾಯಚೂರು -ಅರೆಕೇರಾ, ಸಿರವಾರ ಮತ್ತು ಮಸ್ಕಿ

ಕೊಪ್ಪಳ – ಕಾರಟಗಿ ಮತ್ತು ಕುಕನೂರು

ಬಳ್ಳಾರಿ – ಕುರುಗೋಡು

ವಿಜಯನಗರ – ಕೊಟ್ಟೂರು

ಈ ಕೇಂದ್ರಗಳಲ್ಲಿ ಶಾಲಾ ಶಿಕ್ಷಣದ ಗುಣಮಟ್ಟ ಹಾಗೂ ಫಲಿತಾಂಶವನ್ನು ಹೆಚ್ಚಿಸುವ ದೃಷ್ಟಿಯಿಂದ ಹೊಸ ಶಿಕ್ಷಣ ಕ್ಷೇತ್ರಗಳನ್ನು ಜರೂರಾಗಿ ಸೃಜಿಸುವಂತೆ ಕೋರಲಾಗಿದೆ.

ಕಲ್ಯಾಣ ಕರ್ನಾಟಕದಲ್ಲಿ ಶಿಕ್ಷಣದ ಕ್ರಾಂತಿ ಸೃಷ್ಟಿಸಲು ಉತ್ತಮ ಫಲಿತಾಂಶವನ್ನು ಪಡೆಯುವುದಕ್ಕಾಗಿ ನಮ್ಮ ಪ್ರಾಮಾಣಿಕ ಪ್ರಯತ್ನ ನಿರಂತರವಾಗಿರಲಿದೆ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read