HomeKarnatakaBIG NEWS: ದುಷ್ಕರ್ಮಿಗಳಿಂದ ಚೂರಿ ಇರಿತ; ರಿಯಲ್ ಎಸ್ಟೇಟ್ ಬ್ರೋಕರ್ ಚಿಕಿತ್ಸೆ ಫಲಿಸದೇ ಸಾವು

BIG NEWS: ದುಷ್ಕರ್ಮಿಗಳಿಂದ ಚೂರಿ ಇರಿತ; ರಿಯಲ್ ಎಸ್ಟೇಟ್ ಬ್ರೋಕರ್ ಚಿಕಿತ್ಸೆ ಫಲಿಸದೇ ಸಾವು

ಉಡುಪಿ: ಚೂರಿ ಇರಿತದಿಂದ ಗಂಭೀರವಾಗಿ ಗಾಯಗೊಂಡಿದ್ದ ರಿಯಲ್ ಎಸ್ಟೆಟ್ ಬ್ರೋಕರ್ ಓರ್ವರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ಉಡುಪಿಯ ಮಣಿಪಾಲ್ ಆಸ್ಪತ್ರೆಯಲ್ಲಿ ನಡೆದಿದೆ.

ರಾಘವೇಂದ್ರ (42) ಮೃತ ದುರ್ದೈವಿ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಚಿಕ್ಕನ್ ಸಾಲ್ ಗ್ರಾಮದಲ್ಲಿ ನಿನ್ನೆ ತಡರಾತ್ರಿ ಕಾರಿನಲ್ಲಿ ಬಂದ ದುಷ್ಕರ್ಮಿಗಳು ರಾಘವೇಂದ್ರ ಅವರ ಮೇಲೆ ದಾಳಿ ನಡೆಸಿ, ಎದೆ ಹಾಗೂ ಕಾಲಿನ ಭಾಗಕ್ಕೆ ಚೂರಿ ಇರಿದು ಪರಾರಿಯಾಗಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಕ್ತದ ಮಡುವಲ್ಲಿ ಬಿದ್ದಿದ್ದ ರಾಘುವೇಂದ್ರ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಿಗ್ಗೆ ರಾಘವೇಂದ್ರ ಕೊನೆಯುಸಿರೆಳೆದಿದ್ದಾರೆ.

ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳಿಗಾಗಿ ಶೋಧ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular