ಮೈಸೂರು : ರಿಯಲ್ ಎಸ್ಟೇಟ್ ಉದ್ಯಮಿಯನ್ನ ಕಿಡ್ನ್ಯಾಪ್ ಮಾಡಿ 30 ಲಕ್ಷ ಹಣಕ್ಕೆ ಬೇಡಿಕೆಯಿಟ್ಟಿದ್ದ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.
ಪ್ರಕರಣ ನಡೆದು ಕೆಲವೇ ಗಂಟೆಗಳಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನ ಹೆಡೆಮುರಿ ಕಟ್ಟಿದ್ದಾರೆ.
ವಿಜಯನಗರದ ಹೆರಿಟೇಜ್ ಕ್ಲಬ್ ಬಳಿ ಮೂರನೇ ಹಂತದ ನಿವಾಸಿ ಲೋಕೇಶ್ ಎಂಬುವವರನ್ನ ದುಷ್ಕರ್ಮಿಗಳು ಟಾಟಾ ಸುಮೋದಲ್ಲಿ ಕಿಡ್ನ್ಯಾಪ್ ಮಾಡಿಕೊಂಡು ಹೋಗಿದ್ದರು . ಬಳಿಕ ಪತ್ನಿಗೆ ಕರೆ ಮಾಡಿ ಬರೋಬ್ಬರಿ 30 ಲಕ್ಷ ಹಣಕ್ಕೆ ಡಿಮ್ಯಾಂಡ್ ಮಾಡಿದ್ದರು. ಇದರಿಂದ ಭಯಗೊಂಡ ಲೋಕೇಶ್ ಪತ್ನಿ ವಿಜಯನಗರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಅಲರ್ಟ್ ಆದ ಪೊಲೀಸರು ಕಾರ್ಯಾಚರಣೆ ನಡೆಸಿ ಮೈಸೂರಿನಿಂದ 50 ಕಿಮೀ ದೂರದಲ್ಲಿ ಆರೋಪಿಗಳನ್ನ ಬಂಧಿಸಿ ಲೋಕೇಶ್ ಅವರನ್ನ ರಕ್ಷಣೆ ಮಾಡಿದ್ದಾರೆ.
