Real life super Hero: ಪ್ರಾಣವನ್ನೇ ಪಣಕ್ಕಿಟ್ಟು ಪುಟ್ಟ ಮಗುವಿನ ರಕ್ಷಣೆ | Watch

ನಿಜ ಜೀವನದ ಸೂಪರ್ ಹೀರೋ ಒಬ್ಬರ ಸ್ಟೋರಿ ಇಲ್ಲಿದೆ. ಆಕಸ್ಮಿಕವಾಗಿ ನದಿಗೆ ಬಿದ್ದು ಸಾವಿನೊಂದಿಗೆ ಸೆಣಸಾಡುತ್ತಿದ್ದ ಪುಟ್ಟ ಕಂದನನ್ನು ತನ್ನ ಜೀವದ ಹಂಗು ತೊರೆದು ವ್ಯಕ್ತಿಯೊಬ್ಬರು ರಕ್ಷಿಸಿದ್ದಾರೆ. ಇದರ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಈಗ ಫುಲ್ ವೈರಲ್ ಆಗಿದ್ದು, ಆ ವ್ಯಕ್ತಿಗೆ ಪ್ರಶಂಸೆಗಳ ಸುರಿಮಳೆಯೇ ಹರಿದು ಬರುತ್ತಿದೆ.

ಈ ಘಟನೆ ಜಮ್ಮು ಕಾಶ್ಮೀರದಲ್ಲಿನ ಶ್ರೀನಗರದ ಸಫಾಕದಲ್ ಏರಿಯಾದಲ್ಲಿ ನಡೆದಿದ್ದು, ಏಳು ವರ್ಷದ ಬಾಲಕ ಆಕಸ್ಮಿಕವಾಗಿ ಝೀಲಂ ನದಿಗೆ ಬಿದ್ದಿದ್ದಾನೆ. ಆತ ನೀರಿನಲ್ಲಿ ಮುಳುಗಿ ಕೈ ಕಾಲು ಬಡಿಯುತ್ತಿದ್ದಾಗ ಇದನ್ನು ಸ್ಥಳೀಯರು ಗಮನಿಸಿದ್ದಾರೆ.

ಕೂಡಲೇ ಸಮಯ ಪ್ರಜ್ಞೆ ಮೆರೆದ ವ್ಯಕ್ತಿಯೊಬ್ಬರು ನದಿಗೆ ಹಾರಿ ಬಾಲಕನನ್ನು ಸುರಕ್ಷಿತವಾಗಿ ದಂಡೆಗೆ ಕರೆ ತಂದಿದ್ದಾರೆ. ಈ ಸಂದರ್ಭದಲ್ಲಿ ದಡದ ಮೇಲಿದ್ದ ಮತ್ತೊಬ್ಬ ವ್ಯಕ್ತಿ ಮಗುವನ್ನು ಎತ್ತಿಕೊಂಡಿದ್ದು, ಬಳಿಕ ಸಿಪಿಆರ್ ಮಾಡಿ ಆತನನ್ನು ಸಾವಿನಿಂದ ರಕ್ಷಿಸಿದ್ದಾರೆ.

https://twitter.com/TheYouthPlus/status/1794689038324220347?ref_src=twsrc%5Etfw%7Ctwcamp%5Etweetembed%7Ctwterm%5E1794689038324220347%7Ctwgr%5Efb39

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read