ಇಂದ್ರಜಿತ್ ಲಂಕೇಶ್ ನಿರ್ದೇಶನದ ಬಹು ನಿರೀಕ್ಷಿತ ‘ಗೌರಿ’ ಬಿಡುಗಡೆ ದಿನಾಂಕ ಹತ್ತಿರವಿದ್ದು, ಚಿತ್ರತಂಡ ಒಂದರ ಮೇಲೊಂದು ಸಿಹಿ ಸುದ್ದಿಯನ್ನು ನೀಡುತ್ತಲೇ ಇದೆ. ಇಂದು ನೆಕ್ಸಾಸ್ ಕೋರಮಂಗಲ ಮಾಲ್ ನಲ್ಲಿ ಗೌರಿ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ಕಾರ್ಯಕ್ರಮವಿದ್ದು, ಅತಿಥಿಯಾಗಿ ರಿಯಲ್ ಸ್ಟಾರ್ ಉಪೇಂದ್ರ ಆಗಮಿಸಲಿದ್ದಾರೆ. ಈ ಕುರಿತು ಸೋಶಿಯಲ್ ಮೀಡಿಯಾದಲ್ಲಿ ಘೋಷಣೆ ಮಾಡಲಾಗಿದೆ.
ನೈಜ ಘಟನಾಧಾರಿತ ಈ ಚಿತ್ರದಲ್ಲಿ ಸಮರ್ಜಿತ್ ಹಾಗೂ ಸಾನ್ಯಾ ಅಯ್ಯರ್ ಪ್ರಮುಖ ಪಾತ್ರದಲ್ಲಿದ್ದು, ಮಾನಸಿ ಸುಧೀರ್, ಸಂಪತ್ ಮೈತ್ರೇಯ, ರಾಜೀವ್ ಪಿಲ್ಲೆ ಉಳಿದ ತಾರಾಂಗಣದಲ್ಲಿದ್ದಾರೆ. ಕೆ.ಎಂ. ಪ್ರಕಾಶ್ ಸಂಕಲನ, ಎ.ವಿ.ಕೃಷ್ಣ ಕುಮಾರ್ ಛಾಯಾಗ್ರಹಣವಿದ್ದು, ಜೆಸ್ಸಿ ಗಿಫ್ಟ್, ಚಂದನ್ ಶೆಟ್ಟಿ, ಶಿವು ಬರ್ಗಿ, ಅನಿರುದ್ಧ ಶಾಸ್ತ್ರಿ ಸಂಗೀತ ಸಂಯೋಜನೆ ನೀಡಿದ್ದಾರೆ. ಲಾಫಿಂಗ್ ಬುದ್ಧ ಫಿಲಂಸ್ ಬ್ಯಾನರ್ ನಡಿ ಇಂದ್ರಜಿತ್ ಲಂಕೇಶ್ ನಿರ್ಮಿಸಿದ್ದಾರೆ.