ಸ್ಪರ್ಧೆಯಿಂದ ಹಿಂದೆ ಸರಿಯದ ಬಂಡಾಯ ಅಭ್ಯರ್ಥಿಗಳು: ಹಲವು ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳಿಗೆ ಶಾಕ್

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ನಾಮಪತ್ರ ವಾಪಸ್ ಪಡೆಯಲು ಅಂತಿಮ ದಿನವಾದ ಸೋಮವಾರದವರೆಗೂ ಬಂಡಾಯ ಅಭ್ಯರ್ಥಿಗಳ ಮನವೊಲಿಕೆ ಮಾಡಲಾಗಿದ್ದು, ಕೆಲವು ಕ್ಷೇತ್ರಗಳಲ್ಲಿ ಬಂಡಾಯ ಅಭ್ಯರ್ಥಿಗಳು ನಾಮ ಪತ್ರ ವಾಪಸ್ ಪಡೆದುಕೊಂಡಿದ್ದಾರೆ.

ಮತ್ತೆ ಕೆಲವು ಕ್ಷೇತ್ರಗಳಲ್ಲಿ ಬಂಡಾಯ ಶಮನವಾಗಿಲ್ಲ. ಹೀಗಾಗಿ ಬಂಡಾಯ ಅಭ್ಯರ್ಥಿಗಳು ಕಣದಲ್ಲೇ ಉಳಿದುಕೊಂಡಿದ್ದಾರೆ. ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಬಂಡಾಯ ಅಭ್ಯರ್ಥಿಗಳು ಕಣದಲ್ಲೇ ಉಳಿದುಕೊಂಡಿದ್ದಾರೆ.

ಬಿಜೆಪಿ ಬಂಡಾಯ ಅಭ್ಯರ್ಥಿಗಳಾಗಿ ಚನ್ನಗಿರಿಯಿಂದ ಮಾಡಾಳ್ ಮಲ್ಲಿಕಾರ್ಜುನ, ಹೊಸದುರ್ಗದಲ್ಲಿ ಗೂಳಿಹಟ್ಟಿ ಶೇಖರ್, ಪುತ್ತೂರು ಕ್ಷೇತ್ರದಲ್ಲಿ ಅರುಣ್ ಪುತ್ತಿಲ, ಬಾಗಲಕೋಟೆಯಲ್ಲಿ ಮಲ್ಲಿಕಾರ್ಜುನ ಚರಂತಿಮಠ, ಕುಂದಗೋಳದಲ್ಲಿ ಎಸ್ಐ ಚಿಕ್ಕನಗೌಡರ, ಗುಂಡ್ಲುಪೇಟೆ ಎಂ.ಪಿ. ಸುನಿಲ್, ನಾಗಮಂಗಲ ಬಿ.ಎಂ ಮಲ್ಲಿಕಾರ್ಜುನ ಸ್ಪರ್ಧಿಸಿದ್ದಾರೆ.

ಕಾಂಗ್ರೆಸ್ ಬಂಡಾಯ ಅಭ್ಯರ್ಥಿಗಳಾಗಿ ಚಿತ್ರದುರ್ಗದಲ್ಲಿ ಸೌಭಾಗ್ಯ ಬಸವರಾಜನ್, ಚಿಕ್ಕಪೇಟೆಯಲ್ಲಿ ಕೆಜಿಎಫ್ ಬಾಬು, ಜಗಳೂರು ಹೆಚ್.ಪಿ. ರಾಜೇಶ್, ತೇರದಾಳ ಪದ್ಮಜಿತ್ ನಾಡಗೌಡ, ಮುಧೋಳ ಸತೀಶ್ ಬಂಡಿವಡ್ಡರ್, ಅರಕಲಗೂಡು ಕೃಷ್ಣೇಗೌಡ, ಅರಬಾವಿ ಭೀಮಪ್ಪ ಗಡಾದ ಸ್ಪರ್ಧಿಸಿದ್ದಾರೆ.

ಮಂಡ್ಯದಲ್ಲಿ ಜೆಡಿಎಸ್ ಬಂಡಾಯ ಅಭ್ಯರ್ಥಿಯಾಗಿ ಕೆ.ಎಸ್. ವಿಜಯಾನಂದ ಕಣದಲ್ಲಿ ಉಳಿದುಕೊಂಡಿದ್ದಾರೆ ಮೂರು ಪಕ್ಷಗಳ ನಾಯಕರು ಬಂಡಾಯ ಅಭ್ಯರ್ಥಿಗಳ ಮನವೊಲಿಸಲು ತೀವ್ರ ಪ್ರಯತ್ನ ನಡೆಸಿದರೂ ಪ್ರಯತ್ನ ಕೈಗೂಡಿಲ್ಲ. ಹಲವು ಕ್ಷೇತ್ರಗಳಲ್ಲಿ ಬಂಡಾಯ ಅಭ್ಯರ್ಥಿಗಳು ಕಣದಲ್ಲಿ ಉಳಿದುಕೊಂಡಿದ್ದು, ಅಧಿಕೃತ ಅಭ್ಯರ್ಥಿಗಳ ಮೇಲೆ ಪರಿಣಾಮ ಬೀರಲಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read