BREAKING : ಇಂದು ರೆಬೆಲ್ ಸ್ಟಾರ್ ಅಂಬರೀಷ್ 7 ನೇ ವರ್ಷದ ಪುಣ್ಮಸ್ಮರಣೆ : ಸಮಾಧಿಗೆ ಕುಟುಂಬಸ್ಥರಿಂದ ಪೂಜೆ ಸಲ್ಲಿಕೆ.!

ಬೆಂಗಳೂರು : ಕನ್ನಡ ಚಿತ್ರರಂಗದ ಖ್ಯಾತ ನಟ ಮತ್ತು ರಾಜಕಾರಣಿ ರೆಬೆಲ್ ಸ್ಟಾರ್ ಅಂಬರೀಶ್ ನಿಧನರಾಗಿ ಇಂದಿಗೆ 7 ವರ್ಷ . 7 ನೇ ವರ್ಷದ ಪುಣ್ಯಸ್ಮರಣೆ ಹಿನ್ನೆಲೆ ಅಂಬರೀಷ್ ಪತ್ನಿ ಸುಮಲತಾ ತಮ್ಮ ಕುಟುಂಬಸ್ಥರ ಜೊತೆ ಇಂದು ಅಂಬಿ ಸಮಾಧಿಗೆ ಪೂಜೆ ಸಲ್ಲಿಸಿದರು.

ಬೆಂಗಳೂರಿನಲ್ಲಿರುವ ಕಂಠೀರವ ಸ್ಟೇಡಿಯಂ ನಲ್ಲಿರುವ ಅಂಬಿ ಸಮಾಧಿಗೆ ಕುಟುಂಬಸ್ಥರು ಪೂಜೆ ಸಲ್ಲಿಸಿದರು.
ನಂತರ ಅಭಿಮಾನಿಗಳು ನೆರೆದಿದ್ದವರಿಗೆ ಅನ್ನದಾನದ ವ್ಯವಸ್ಥೆ ಮಾಡಿದರು. ಹಿನ್ನೆಲೆ ಹಲವು ಕಡೆಯಿಂದ ಅಭಿಮಾನಿಗಳು ಆಗಮಿಸಿದ್ದರು. ಈ ಸಂದರ್ಭದಲ್ಲಿ ಹಿರಿಯ ನಟ ದೊಡ್ಡಣ್ಣ. ಅಂಬರೀಷ್ ಪುತ್ರ ಅಭಿಷೇಕ್ ಅಂಬರೀಷ್. ರಾಕ್ ಲೈನ್ ವೆಂಕಟೇಶ್ ಮತ್ತಿತರರಿದ್ದರು.

ಕನ್ನಡ ಚಿತ್ರರಂಗದ ಖ್ಯಾತ ನಟ ಮತ್ತು ರಾಜಕಾರಣಿ ಅಂಬರೀಷ್ ಅವರು 1952ರ ಮೇ 29ರಂದು ಮಂಡ್ಯ ಜಿಲ್ಲೆಯ ದೊಡ್ಡರಸನಕೆರೆ ಗ್ರಾಮದಲ್ಲಿ ಜನಿಸಿದರು ಮತ್ತು 2018ರ ನವೆಂಬರ್ 24ರಂದು ನಿಧನರಾದರು. ಪುಟ್ಟಣ್ಣ ಕಣಗಾಲ್ ನಿರ್ದೇಶನದ ‘ನಾಗರಹಾವು’ ಚಿತ್ರದಲ್ಲಿ ‘ಜಲೀಲ’ನ ಪಾತ್ರದ ಮೂಲಕ ಅವರು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. ನಂತರ ಅಂಬಿ ನಟ, ರಾಜಕಾರಣಿ, ವಸತಿ ಸಚಿವರು, ಸಂಸದರಾಗಿ ಸೇವೆ ಸಲ್ಲಿಸಿದ್ದಾರೆ. ಅವರು ಕರ್ನಾಟಕ ರಾಜ್ಯ ವಿಶೇಷ ಪ್ರಶಸ್ತಿ, ಫಿಲ್ಮ್ಫೇರ್ ಪ್ರಶಸ್ತಿ, ನಂದಿ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳನ್ನು ಪಡೆದಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read