ಕೆಎಂಎಫ್ ಇತಿಹಾಸದಲ್ಲೇ ದಾಖಲೆ ಪ್ರಮಾಣದ ಹಾಲು ಸಂಗ್ರಹ

ಮೈಸೂರು: ರಾಜ್ಯದಲ್ಲಿ ಶುಕ್ರವಾರ ಕೆಎಂಎಫ್ ಇತಿಹಾಸದಲ್ಲಿಯೇ ಅತಿ ಹೆಚ್ಚು 94.26 ಲಕ್ಷ ಕೆಜಿ ಹಾಲು ಸಂಗ್ರಹವಾಗಿದ್ದು, ದಾಖಲೆ ಬರೆದಿದೆ ಎಂದು ವ್ಯವಸ್ಥಾಪಕ ನಿರ್ದೇಶಕ ಎಂ.ಕೆ. ಜಗದೀಶ್ ತಿಳಿಸಿದ್ದಾರೆ.

ವಿಶ್ವ ಹಾಲು ದಿನದ ಅಂಗವಾಗಿ ಮೈಸೂರಿನಲ್ಲಿ ಆಯೋಜಿಸಿದ ಬೈಕ್ ರ್ಯಾಲಿಯ ವೇಳೆ ಮಾತನಾಡಿದ ಅವರು, ಸದ್ಯದಲ್ಲಿಯೇ ಹಾಲು ಸಂಗ್ರಹ ಒಂದು ಕೋಟಿ ಕೆಜಿಗೆ ಏರಿಕೆಯಾಗುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.

ಈ ಬಾರಿ ಬೇಸಿಗೆಯಲ್ಲಿಯೂ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಹಾಲು, ಮೊಸರು, ಮಜ್ಜಿಗೆ ಉತ್ಪನ್ನ ನೀಡಲಾಗಿದೆ. ಗರಿಷ್ಠ 39 ಸಾವಿರ ಲೀಟರ್ ಐಸ್ ಕ್ರೀಮ್ ಮಾರಾಟ ಮಾಡಲಾಗಿದೆ ಎಂದು ಹೇಳಿದ್ದಾರೆ.

ಹಾಲಿನ ಉತ್ಪಾದನೆ ರಾಜ್ಯದಲ್ಲಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮುಂಬೈನಲ್ಲಿಯೂ ಪ್ರತಿನಿತ್ಯ ಎರಡು ಲಕ್ಷ ಲೀಟರ್ ಹಾಲು ಮಾರಾಟಕ್ಕೆ ಕ್ರಮ ಕೈಗೊಳ್ಳಲಾಗಿದೆ. ತಮಿಳುನಾಡಿನ ಚೆನ್ನೈ ಮಾರುಕಟ್ಟೆಯಲ್ಲಿ ಪ್ರತಿದಿನ 35,000 ಲೀಟರ್ ಹಾಲು ಮಾರಾಟ ಮಾಡಲಾಗುತ್ತಿದ್ದು, ಮುಂಬೈ ಮತ್ತು ಚೆನ್ನೈ ಮಾರುಕಟ್ಟೆಯಲ್ಲಿ ಇನ್ನೂ ಒಂದು ಲಕ್ಷ ಲೀಟರ್ ಹೆಚ್ಚು ಹಾಲು ಮಾರಾಟಕ್ಕೆ ಕ್ರಮ ಕೈಗೊಳ್ಳಲಾಗಿದೆ. ನಂದಿನಿ ಪಾರ್ಲರ್ ಗಳಲ್ಲಿ ಕೆಎಂಎಫ್ ಉತ್ಪನ್ನಗಳನ್ನು ಸಿಗುವಂತೆ ಮಾಡಲಾಗಿದೆ. ಹಾಲು ಪೂರೈಸಿದ ರೈತರಿಗೆ ನಿಗದಿತ ಅವಧಿಯಲ್ಲಿ ಹಣ ಬಿಡುಗಡೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read