ಬೆಂಗಳೂರು : ಭೂಮಿ ದಾಖಲೆಗಳಲ್ಲಿ ನಕಲಿ ಎಂಟ್ರಿಗಳು ಹಾಗೂ ಸುಳ್ಳು ದಾಖಲೆಗಳು ಸೃಷ್ಟಿ ಆಗುವುದನ್ನು ತಡೆಯಲು ರಾಜ್ಯ ಸರ್ಕಾರ ಭೂ ದಾಖಲೆ ಯೋಜನೆ ಜಾರಿಗೆ ತಂದಿದೆ.
ನಗರದ ಜಿಲ್ಲಾಧಿಕಾರಿ ಕಛೇರಿಯಲ್ಲಿ ಕಂದಾಯ ಇಲಾಖೆ ವತಿಯಿಂದ ಭೂಮಿಯ ದಾಖಲೆಗಳನ್ನು ಡಿಜಿಟಲೀಕರಿಸುವ “ಭೂ ಸುರಕ್ಷಾ ಯೋಜನೆ” ಗೆ ಚಾಲನೆ ಸಚಿವ ಕೃಷ್ಣ ಭೈರೇಗೌಡ ಚಾಲನೆ ನೀಡಿದರು.
ಭೂಮಿ ದಾಖಲೆಗಳಲ್ಲಿ ನಕಲಿ ಎಂಟ್ರಿಗಳು ಹಾಗೂ ಸುಳ್ಳು ದಾಖಲೆಗಳು ಸೃಷ್ಟಿ ಆಗುವುದನ್ನು ತಡೆಯಲು ಡಿಜಿಟಲೀಕರಣ ಮಹತ್ವದ ಹೆಜ್ಜೆಯಾಗಿದೆ ಎಂದು ರಾಜ್ಯದ ಕಂದಾಯ ಸಚಿವರಾದ ಕೃಷ್ಣಭೈರೇಗೌಡ ಅವರು ತಿಳಿಸಿದರು.
ರಾಜ್ಯದಲ್ಲಿ ಕಂದಾಯ ಇಲಾಖೆ ಎಲ್ಲಾ ಮೂಲ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಶಾಶ್ವತವಾಗಿ ಸಂರಕ್ಷಿಸಲಾಗುತ್ತಿದೆ. ತಾಲ್ಲೂಕು ಕಚೇರಿಗಳಲ್ಲಿರುವ ಹಳೆಯ ದಾಖಲಾತಿಗಳನ್ನು ಡಿಜಿಟಲೀಕರಿಸುವ ಮೂಲಕ ಸಾರ್ವಜನಿಕರಿಗೆ ತಮ್ಮ ಭೂ ದಾಖಲಾತಿಗಳನ್ನು ಸುಲಭವಾಗಿ ಪಡೆಯಲು ಈ ಯೋಜನೆಯು ಸಹಕಾರಿಯಾಗಿದೆ ಎಂದು ತಿಳಿಸಿದರು. ಸಾರ್ವಜನಿಕರು ಭೂ ಸುರಕ್ಷಾ ವೆಬ್ ಸೈಟ್ ಮೂಲಕ ತಮ್ಮ ಭೂ ದಾಖಲೆಗಳಿಗೆ ನಾಡ ಕಚೇರಿಯಲ್ಲಿ ಅರ್ಜಿ ಸಲ್ಲಿಸಿ ನೇರವಾಗಿ ತಮ್ಮ ಮನೆಯಲ್ಲಿ ದಾಖಲೆಗಳನ್ನು ಪಡೆಯಬಹುದಾಗಿದೆ .
ಜನರಿಗೆ ಭೂ ಸುರಕ್ಷಾ ವೆಬ್ ಸೈಟ್ ಅಲ್ಲಿ ಸಿಗುವ ಭೂ ದಾಖಲೆಗಳೇ ಅಧಿಕೃತ ದಾಖಲೆಗಳಾಗಿವೆ. ಜನ ಬಹುಸುರಕ್ಷಾ ವೆಬ್ಸೈಟ್ಗೆ ತೆರಳಿ ದಾಖಲೆ ಪಡೆದು ತಮಗೆ ಬೇಕಾದ ಕೆಲಸಕ್ಕೆ ಬಳಸಿಕೊಳ್ಳಬಹುದು ಎಂದು ಸರ್ಕಾರ ಈಗಾಗಲೇ ಸುತ್ತೋಲೆ ಹೊರಡಿಸಿದೆ . ಕಂದಾಯ ಇಲಾಖೆಯ ದಾಖಲೆಗಳು ಅಲ್ಲದೆ ಸರ್ವೆ ದಾಖಲೆಗಳನ್ನು ಕೂಡ ಆನ್ಲೈನ್ಲ್ಲಿ ಜನ ಪಡೆಯುವ ವ್ಯವಸ್ಥೆ ಮಾಡಲಾಗಿದೆ.