HomeKarnataka400 ಪಶು ವೈದ್ಯರ ನೇಮಕ

400 ಪಶು ವೈದ್ಯರ ನೇಮಕ

ಮೈಸೂರು: ರಾಜ್ಯದಲ್ಲಿ ಪಶು ವೈದ್ಯರ ಕೊರತೆ ನೀಗಿಸಲು ಶೀಘ್ರವೇ 400 ಪಶು ವೈದ್ಯರ ನೇಮಕಾತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಪಶು ಸಂಗೋಪನೆ ಸಚಿವ ಕೆ. ವೆಂಕಟೇಶ್ ತಿಳಿಸಿದ್ದಾರೆ.

ನಂಜನಗೂಡು ತಾಲೂಕಿನ ಕಂದೇಗಾಲ ಗ್ರಾಮದಲ್ಲಿ ಶನಿವಾರ ನೂತನ ಪಶು ಚಿಕಿತ್ಸಾ ಆಸ್ಪತ್ರೆ ಉದ್ಘಾಟಿಸಿ ಅವರು ಮಾತನಾಡಿ, 400 ಪಶು ವೈದ್ಯರ ನೇಮಕಾತಿ ಜತೆಗೆ ಪಶು ಚಿಕಿತ್ಸಾಲಯಗಳಿಗೆ ಕಟ್ಟಡ ಕೊರತೆ ನೀಗಿಸಲು ರಾಜ್ಯದಾದ್ಯಂತ 200 ಕಟ್ಟಡಗಳ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮನವಿಗೆ ಸ್ಪಂದಿಸಿ ರಾಜ್ಯಾದ್ಯಂತ 200 ಪಶು ಚಿಕಿತ್ಸಾಲಯ ಕಟ್ಟಡಗಳನ್ನು ಮಂಜೂರು ಮಾಡಿದ್ದಾರೆ. ಇವುಗಳ ನಿರ್ಮಾಣಕ್ಕೆ ಕ್ರಮ ವಹಿಸಲಾಗಿದೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular