GOOD NEWS: ಪಶುಪಾಲನಾ ಇಲಾಖೆಯಲ್ಲಿ 700 ಡಿ ಗ್ರೂಪ್, 400 ಪಶು ವೈದ್ಯರ ನೇಮಕಾತಿ

ಮೈಸೂರು: ಪಶುಪಾಲನಾ ಇಲಾಖೆಯಲ್ಲಿ 700 ಡಿ ಗ್ರೂಪ್ ನೌಕರರ ನೇಮಕಾತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅನುಮತಿ ನೀಡಿದ್ದು, ಶೀಘ್ರದಲ್ಲೇ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಪಶು ಸಂಗೋಪನಾ ಸಚಿವ ಕೆ. ವೆಂಕಟೇಶ್ ತಿಳಿಸಿದ್ದಾರೆ.

ಪಶುಪಾಲನಾ ಮತ್ತು ಪಶು ವೈದ್ಯಕೀಯ ಇಲಾಖೆ, ಕರ್ನಾಟಕ ಪಶು ವೈದ್ಯಕೀಯ ಸಂಘದ ಸಹಯೋಗದಲ್ಲಿ ಮೈಸೂರಿನ ಕೆಎಸ್ಒಯು ಘಟಿಕೋತ್ಸವ ಭವನದಲ್ಲಿ ಶನಿವಾರ ಆಯೋಜಿಸಿದ್ದ ಪಶು ವೈದ್ಯರ ರಾಜ್ಯಮಟ್ಟದ ತಾಂತ್ರಿಕ ವಿಚಾರ ಸಂಕಿರಣ, ಕಾಲು ಬಾಯಿ ಜ್ವರದ ವಿರುದ್ಧ ಆರನೇ ಸುತ್ತಿನ ಲಸಿಕಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ 400 ಪಶು ವೈದ್ಯರನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲಾಗಿದೆ. 400 ಕಾಯಂ ವೈದ್ಯರ ನೇಮಕಾತಿಗೆ ಕರ್ನಾಟಕ ಲೋಕಸೇವಾ ಆಯೋಗ ಮಟ್ಟದಲ್ಲಿ ಪ್ರಕ್ರಿಯೆ ನಡೆದಿದೆ. ಇಲಾಖೆಯ ಕೊರತೆಗಳನ್ನು ನೀಗಿಸಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ದಾರೆ.

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೊಕಟನೂರ ಮತ್ತು ಪುತ್ತೂರಿನಲ್ಲಿ ಸರ್ಕಾರಿ ಪಶು ವೈದ್ಯ ಕಾಲೇಜುಗಳನ್ನು ಈ ವರ್ಷವೇ ಆರಂಭಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read