HomeLatest Newsಇಂದಿನಿಂದ ವಿವಿಧ ಇಲಾಖೆ ನೇಮಕಾತಿ ಪರೀಕ್ಷೆ: ಮುಖಚಹರೆ ಪತ್ತೆ, ಸಿಸಿಟಿವಿ, ಜಾಮರ್ ಅಳವಡಿಕೆ ಸೇರಿ ಬಿಗಿ...

ಇಂದಿನಿಂದ ವಿವಿಧ ಇಲಾಖೆ ನೇಮಕಾತಿ ಪರೀಕ್ಷೆ: ಮುಖಚಹರೆ ಪತ್ತೆ, ಸಿಸಿಟಿವಿ, ಜಾಮರ್ ಅಳವಡಿಕೆ ಸೇರಿ ಬಿಗಿ ಕ್ರಮ

ಬೆಂಗಳೂರು: ಬಿಡಿಎ, ಬೆಂಗಳೂರು ಜಲಮಂಡಳಿ, ತಾಂತ್ರಿಕ ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳ ನೇಮಕಾತಿಗೆ ಕಲ್ಯಾಣ ಕರ್ನಾಟಕದ ಅಭ್ಯರ್ಥಿಗಳಿಗೆ ಡಿ.20ರಿಂದ 22ರವರೆಗೆ ಲಿಖಿತ ಪರೀಕ್ಷೆ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬಿಗಿ ಕ್ರಮಗಳನ್ನು ಕೈಗೊಂಡಿದೆ.

ವಿವಿಧ ಹುದ್ದೆಗಳಿಗೆ ಕಲ್ಯಾಣ ಕರ್ನಾಟಕದ ಒಟ್ಟು‌ 24,800 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು ಅಷ್ಟೂ‌ ಮಂದಿಗೆ ಮೂರು ದಿನಗಳ ಕಾಲ ಪರೀಕ್ಷೆ ನಡೆಸಲಾಗುತ್ತದೆ.

ಅತ್ಯಂತ ಪಾರದರ್ಶಕ ಹಾಗೂ ಅಕ್ರಮಗಳಿಗೆ ಅವಕಾಶ ಇಲ್ಲದಂತೆ ಪರೀಕ್ಷೆಗಳನ್ನು ನಡೆಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಪರೀಕ್ಷಾ ಕೊಠಡಿಯಲ್ಲಿ ಸಿಸಿಟಿವಿ ಜತೆಗೆ ಜಾಮರ್ ಕೂಡ ಹಾಕಿದ್ದು, ಎಲೆಕ್ಟ್ರಾನಿಕ್ ವಸ್ತುಗಳ ಬಳಕೆಗೆ ನಿರ್ಬಂಧ ವಿಧಿಸಲಾಗಿದೆ. ಮುಖಚಹರೆ ಪತ್ತೆ ತಂತ್ರಜ್ಞಾನ ಬಳಸಿಯೇ ಅಭ್ಯರ್ಥಿಗಳನ್ನು ಪರೀಕ್ಷಾ ಕೇಂದ್ರದ ಒಳಗೆ ಬಿಡಲಾಗುತ್ತದೆ. ವಸ್ತ್ರ ಸಂಹಿತೆ ಇದ್ದು ಅಭ್ಯರ್ಥಿಗಳು ಕಟ್ಟುನಿಟ್ಟಾಗಿ ಪಾಲಿಸಬೇಕು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಡಿ.20ರಂದು ಬೆಂಗಳೂರಿನ ಏಳು ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಒಟ್ಟು 3,486 ಮಂದಿ ತೆಗೆದುಕೊಂಡಿದ್ದಾರೆ. ಬೆಂಗಳೂರು, ಬಳ್ಳಾರಿ, ದಾವಣಗೆರೆ, ಧಾರವಾಡ, ಕಲ್ಬುರ್ಗಿ ಮತ್ತು ಕೊಪ್ಪಳ ಜಿಲ್ಲೆಗಳ 51 ಕೇಂದ್ರಗಳಲ್ಲಿ  ಡಿ.21ರಂದು ನಡೆಯುವ ಪರೀಕ್ಷೆಯನ್ನು 21,198 ಮಂದಿ ಹಾಗೂ ಡಿ.22ರಂದು ಬೆಂಗಳೂರಿನಲ್ಲಿ ಮಾತ್ರ‌ ನಡೆಯುವ ಪರೀಕ್ಷೆಯನ್ನು 1,166 ಮಂದಿ ತೆಗೆದುಕೊಂಡಿದ್ದಾರೆ.

ವಿವಿಧ ಹುದ್ದೆಗಳಿಗೆ ಪರೀಕ್ಷೆ ನಡೆಯುತ್ತಿರುವುದರಿಂದ ತಮಗೆ ಅನ್ವಯವಾಗುವ ದಿನ ನಿಗದಿತ ಕೇಂದ್ರಕ್ಕೆ ಹೋಗಿ ಪರೀಕ್ಷೆ ಬರೆಯಬೇಕು.

ಎಲ್ಲರಿಗೂ ಕನ್ನಡ ಪರೀಕ್ಷೆ

ಕಲ್ಯಾಣ ಕರ್ನಾಟಕ ಸೇರಿದಂತೆ ಇತರ ಎಲ್ಲರಿಗೂ ಡಿ.28ರಂದು ಕನ್ನಡ ಕಡ್ಡಾಯ ಪರೀಕ್ಷೆ ನಡೆಯಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular