HomeLatest Newsನಗರ ಸ್ಥಳೀಯ ಸಂಸ್ಥೆಗಳಲ್ಲಿ ಪೌರ ಕಾರ್ಮಿಕರ ಹುದ್ದೆಗಳಿಗೆ ನೇಮಕಾತಿ: ಸಿಎಂ ಸಿದ್ಧರಾಮಯ್ಯ ಮಾಹಿತಿ

ನಗರ ಸ್ಥಳೀಯ ಸಂಸ್ಥೆಗಳಲ್ಲಿ ಪೌರ ಕಾರ್ಮಿಕರ ಹುದ್ದೆಗಳಿಗೆ ನೇಮಕಾತಿ: ಸಿಎಂ ಸಿದ್ಧರಾಮಯ್ಯ ಮಾಹಿತಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಗೃಹಕಚೇರಿ ಕೃಷ್ಣಾದಲ್ಲಿ ವಿವಿಧ ಪೌರ ಕಾರ್ಮಿಕ ಸಂಘಟನೆಗಳ ಬೇಡಿಕೆ ಕುರಿತು ಸಭೆ ನಡೆಸಿದ್ದಾರೆ.

ಸಭೆಯ ಮುಖ್ಯಾಂಶಗಳು ಹೀಗಿವೆ:

ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿಯಿರುವ ಪೌರಕಾರ್ಮಿಕರ ಹುದ್ದೆಗಳಿಗೆ ನೇಮಕಾತಿ ಸೇರಿದಂತೆ ಪೌರ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸುವ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿಯಿದ್ದ ಪೌರ ಕಾರ್ಮಿಕರ 2,992 ಹುದ್ದೆಗಳ ಪೈಕಿ 492 ಹುದ್ದೆಗಳನ್ನು ಭರ್ತಿ ಮಾಡಲಾಗಿದ್ದು, ಇನ್ನುಳಿದ ಹುದ್ದೆಗಳನ್ನು ಭರ್ತಿ ಮಾಡಬೇಕಾಗಿದೆ.

ನಗರ ಸ್ಥಳೀಯ ಸಂಸ್ಥೆಗಳಲ್ಲಿ ನೇರ ವೇತನ ಅಡಿ ಪೌರ ಕಾರ್ಮಿಕರಾಗಿ ಕೆಲಸ ಮಾಡುತ್ತಿರುವ ಸಂದರ್ಭದಲ್ಲಿ ಮೃತಪಟ್ಟ ಪೌರ ಕಾರ್ಮಿಕರ ಅವಲಂಬಿತರಿಗೆ ರೂ.10 ಲಕ್ಷ ಪರಿಹಾರವನ್ನು ನಗರ ಸ್ಥಳೀಯ ಸಂಸ್ಥೆಗಳ ಸ್ವಂತ ಸಂಪನ್ಮೂಲದಿಂದ ಭರಿಸಲು ಈಗಾಗಲೇ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular