ದಾವಣಗೆರೆ: ದಕ್ಷಿಣ-ಕೇಂದ್ರೀಯ ರೈಲ್ವೆ ವಿಭಾಗ, (ಸಿಕಂದರಾಬಾದ್) ವತಿಯಿಂದ ಹೊರಗುತ್ತಿಗೆ ಆಧಾರದ ಮೇಲೆ 118 ಪಾಯಿಂಟ್ಸ್ಮನ್ ಹುದ್ದೆಗಳಿಗೆ ಅರ್ಹ ಮಾಜಿ ಸೈನಿಕರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತ ಹಾಗೂ ಅರ್ಹ ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಯ 54 ವರ್ಷದೊಳಗಿನ ಅರ್ಹ ಮಾಜಿ ಸೈನಿಕರು ನವೆಂಬರ್ 18 ರೊಳಗೆ ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರ ಕಚೇರಿಯಲ್ಲಿ ನಿಗದಿತ ನಮೂನೆಯೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ, 08182-220925 ಗೆ ಸಂಪರ್ಕಿಸಬಹುದು ಎಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.
ನವೆಂಬರ್ 13 ರಂದು ನೇರ ಸಂದರ್ಶನ
ಶಿವಮೊಗ್ಗ: ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಶಿವಮೊಗ್ಗ ವತಿಯಿಂದ ದಿನಾಂಕ 13-11-2026 ರಂದು ಬೆಳಿಗ್ಗೆ 10 ಗಂಟೆಗೆ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ.
ಈ ನೇರ ಸಂದರ್ಶನದಲ್ಲಿ ‘ಸಾಯಿ ಇಂಡಿಯಾ ಪ್ರೈ. ಲಿ.’ ಖಾಸಗಿ ಕಂಪನಿಯು ಭಾಗವಹಿಸುತ್ತಿದ್ದು, ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಿದೆ.
ಶೈಕ್ಷಣಿಕ ಅರ್ಹತೆ: ಐಟಿಐ ಮತ್ತು ಯಾವುದೇ ವಿಷಯದಲ್ಲಿ ಡಿಪ್ಲೊಮಾ ಮಾಡಿರುವ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಭಾಗವಹಿಸಬಹುದು.
ಪ್ರವೇಶ ಉಚಿತವಿದ್ದು, ಆಸಕ್ತ ಅಭ್ಯರ್ಥಿಗಳು ತಮ್ಮ ರಿಸ್ಯೂಮ್ ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಗುತ್ಯಪ್ಪ ಕಾಲೋನಿ, ಪಂಪಾ ನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿಯನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ: 9380663606, 9108235132 ಮೂಲಕ ಸಂಪರ್ಕಿಸಬಹುದು ಎಂದು ಉದ್ಯೋಗಾಧಿಕಾರಿ ತಿಳಿಸಿದ್ದಾರೆ.
ಎಸ್ಸಿ/ಎಸ್ಟಿ ಅಲೆಮಾರಿ ಮತ್ತು ಅರೆಅಲೆಮಾರಿ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
ದಾವಣಗೆರೆ: 2026-27 ನೇ ಸಾಲಿಗೆ ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಮತ್ತು ಅರೆಅಲೆಮಾರಿ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಈ ಯೋಜನೆಗಳ ಸೌಲಭ್ಯ ಪಡೆದುಕೊಳ್ಳಲು ಚನ್ನಗಿರಿ ತಾಲ್ಲೂಕಿನ ಅರ್ಹ ಫಲಾನುಭವಿಗಳು ‘ಸೇವಾಸಿಂಧು’ / ‘ಸೇವಾಸೌರಭ’ ಪೋರ್ಟಲ್ ಮೂಲಕ ನವೆಂಬರ್ 30 ರೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಚನ್ನಗಿರಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದಾವಣಗೆರೆಯಲ್ಲಿ ಜವಳಿ ವಲಯದ ರಫ್ತು ಉತ್ತೇಜನ ಕುರಿತು ಒಂದು ದಿನದ ಕಾರ್ಯಾಗಾರ.
ದಾವಣಗೆರೆ: ಕೇಂದ್ರ ಸರ್ಕಾರದ ಜವಳಿ ಮಂತ್ರಾಲಯದ ವತಿಯಿಂದ $100 ಬಿಲಿಯನ್ ಡಾಲರ್ ರಫ್ತು ಗುರಿ ಸಾಧನೆಗೆ ಸಂಭಾವ್ಯ ಜವಳಿ ವಲಯ ರಫ್ತು ಉತ್ತೇಜನಕ್ಕಾಗಿ ಜಿಲ್ಲೆಯಲ್ಲಿ ಒಂದು ದಿನದ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.
ನವೆಂಬರ್ 12 ರಂದು ಬೆಳಿಗ್ಗೆ 9:30 ಗಂಟೆಗೆ ಜಯಣ್ಣ ಚಿಗಟೇರಿ ಸಭಾಂಗಣ, ಧ.ರಾ.ಮ. ಸ್ಕೌಟ್ ಭವನ, ಮೊದಲನೇ ಮುಖ್ಯ ರಸ್ತೆ, ಪಿ ಜೆ ಬಡಾವಣೆ, ದಾವಣಗೆರೆ ಇಲ್ಲಿ ನಡೆಯಲಿದೆ.
ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್, ರಾಮಾಂಜನೇಯ ಪ್ಲಾಜಾ ಕಾಲೇಜ್ ರಸ್ತೆ, ನಿಟ್ಟುವಳ್ಳಿ, ದಾವಣಗೆರೆ-577004 ಅಥವಾ ದೂರವಾಣಿ ಸಂಖ್ಯೆ: 08192-262362 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಪಂಚಾಯತ್ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

