HomeKarnatakaJOB ALERT : ಖಾಸಗಿ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳ ನೇಮಕಾತಿ : ಆಗಸ್ಟ್ 10 ರಂದು...

JOB ALERT : ಖಾಸಗಿ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳ ನೇಮಕಾತಿ : ಆಗಸ್ಟ್ 10 ರಂದು ನೇರ ಸಂದರ್ಶನ

ಬೆಂಗಳೂರು : ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವತಿಯಿಂದ ಆಗಸ್ಟ್ 10 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 2.00 ಗಂಟೆಯವರೆಗೆ ಖಾಸಗಿ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳ ನೇಮಕಾತಿಗಾಗಿ ನೇರ ಸಂದರ್ಶನ ಹಮ್ಮಿಕೊಳ್ಳಲಾಗಿದೆ.

10 ನೇ ತರಗತಿ ಉತ್ತೀರ್ಣ , ಪಿ.ಯು.ಸಿ. ಹಾಗೂ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರುವ, 35 ವರ್ಷಗಳ ವಯೋಮಿತಿಯೊಳಗಿನ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಉಪ ಪ್ರಾದೇಶಿಕ ಉದ್ಯೋಗ ವಿನಿಮಯ ಕಚೇರಿ, ಸಿ.ಓ.ಇ. ಕಟ್ಟಡ, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಆವರಣ, ತುಮಕೂರು ರಸ್ತೆ, ಪೀಣ್ಯ, ಬೆಂಗಳೂರು ಅಥವಾ ದೂರವಾಣಿ ಸಂಖ್ಯೆ 8970615380 ಅನ್ನು ಸಂಪರ್ಕಿಸಬಹುದು ಎಂದು ಉಪ ಪ್ರಾದೇಶಿಕ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನ

ಬೆಂಗಳೂರು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ಆಗಸ್ಟ್ 17 ರಂದು 12 ದಿನಗಳ ಕೋಳಿ ಸಾಕಾಣಿಕೆ, ಆಗಸ್ಟ್ 20 ರಿಂದ 31 ದಿನಗಳ ಎಂಬ್ರಾಡರಿ, ಆಗಸ್ಟ್ 31 ರಂದು 12 ದಿನಗಳ ಕುರಿ ಮತ್ತು ಮೇಕೆ ಸಾಕಾಣಿಕೆ , ಸೆಪ್ಟೆಂಬರ್ 01 ರಂದು 13 ದಿನಗಳು ಸಿಸಿಟಿವಿ, ಸೆಪ್ಟೆಂಬರ್ 15 ರಂದು 10 ದಿನಗಳ ಅಣಬೆ ಕೃಷಿ, ಸೆಪ್ಟೆಂಬರ್ 01 ರಂದು 13 ದಿನಗಳು ಟೈಲರಿಂಗ್ ಕುರಿತು ಉಚಿತ ತರಬೇತಿಯನ್ನು ಹಮ್ಮಿಕೊಳ್ಳಲಾಗಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು 18 ರಿಂದ 50 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಅಭ್ಯರ್ಥಿಗಳು ಆಧಾರ್‌ ಕಾರ್ಡ್‌ನ್ನು ಹೊಂದಿರಬೇಕು ಹಾಗೂ ಬಿಪಿಎಲ್‌ ಕಾರ್ಡ್‌ ಅನ್ನು ಹೊಂದಿರುವ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9481506564, 9241482541, 9380162042, 9113880324 ಅನ್ನು ಎಂದು ರುಡ್‌ಸೆಟ್‌ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular