HomeKarnatakaJOB ALERT : ಖಾಸಗಿ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳ ನೇಮಕಾತಿ ; ನಾಳೆ ನೇರ ಸಂದರ್ಶನ

JOB ALERT : ಖಾಸಗಿ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳ ನೇಮಕಾತಿ ; ನಾಳೆ ನೇರ ಸಂದರ್ಶನ

ಶಿವಮೊಗ್ಗ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ದಿನಾಂಕ 29-07-2026 ರಂದು ಬೆಳಿಗ್ಗೆ 10 ಗಂಟೆಗೆ ಉದ್ಯೋಗಾಕಾಂಕ್ಷಿಗಳಿಗಾಗಿ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ.

ಈ ನೇರ ಸಂದರ್ಶನದಲ್ಲಿ ಎಸ್. ಎಂ. ಎಫ್. ಈ. ಇಂಡಿಯಾ ಕ್ರೆಡಿಟ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯು ಭಾಗವಹಿಸಲಿದ್ದು, ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಿದೆ.18 ರಿಂದ 30 ವರ್ಷದೊಳಗಿನ ಪುರುಷ ಅಭ್ಯರ್ಥಿಗಳನ್ನು ಮಾತ್ರ ಆಯ್ಕೆ ಮಾಡಲಾಗುವುದು. ಪ್ರವೇಶ ಉಚಿತವಾಗಿದ್ದು, ಅಭ್ಯರ್ಥಿಗಳು ಪಿಯುಸಿ ಅಥವಾ ಯಾವುದೇ ಪದವಿಯಲ್ಲಿ ಉತ್ತೀರ್ಣರಾಗಿರಬೇಕು.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ತಮ್ಮ ಬಯೋ-ಡೇಟಾ ಹಾಗೂ ಆಧಾರ್ ಕಾರ್ಡ್‌ ಪ್ರತಿಗಳೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಗುತ್ಯಪ್ಪ ಕಾಲೋನಿ, ಪಂಪಾ ನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ – 577205 ಇಲ್ಲಿಸಂದರ್ಶನಕ್ಕೆ ಹಾಜರಾಗಬಹುದು.ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆಗಳು: 9380663606, 9108235132 ಅಥವಾ ಖುದ್ದಾಗಿ ಕಚೇರಿಗೆ ಭೇಟಿ ನೀಡಿ ಮಾಹಿತಿ‌ ಪಡೆಯಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿಗಳು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಅರ್ಜಿ ಆಹ್ವಾನ

ಶಿವಮೊಗ್ಗ : ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ವತಿಯಿಂದ 2026-27ನೇ ಸಾಲಿನ ವಿಪ್ರ ಸ್ವ ಉದ್ಯಮ ನೇರ ಸಾಲ ಯೋಜನೆಯಡಿ ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರು ಸ್ವಯಂ ಉದ್ಯೋಗ ಕೈಗೊಳ್ಳಲು ನೇರವಾಗಿ ಸಾಲ ಮತ್ತು ಸಹಾಯಧನ ಮಂಜೂರು ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹಸು ಸಾಕಾಣಿಕೆ, ಗುಡಿ ಕೈಗಾರಿಕೆ, ಸಣ್ಣ ಕೈಗಾರಿಕೆ, ಹೋಟೆಲ್ ಉದ್ಯಮ, ಟ್ಯಾಕ್ಸಿ ಮುಂತಾದ ವ್ಯವಹಾರ ವಹಿವಾಟುಗಳನ್ನು ಪ್ರಾರಂಭಿಸಲು ಕನಿಷ್ಠ ರೂ 1.00 ಲಕ್ಷದಿಂದ ಗರಿಷ್ಠ ರೂ.2.00 ಲಕ್ಷಗಳವರೆಗೆ ಆರ್ಥಿಕ ನೆರವು ಒದಗಿಸಲಾಗುತ್ತದೆ. ಈ ಪೈಕಿ ಶೇ. 20ರಷ್ಟು ಸಹಾಯಧನ ಸಿಗಲಿದ್ದು, ಉಳಿಕೆ ಮೊತ್ತ ರೂ.80,000/- ವರೆಗೆ ಶೇ. 4ರಷ್ಟು ವಾರ್ಷಿಕ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ದೊರೆಯಲಿದೆ.ಅಭ್ಯರ್ಥಿಗಳು ಚಾಲ್ತಿಯಲ್ಲಿರುವ ಆರ್ಥಿಕವಾಗಿ ಹಿಂದುಳಿದ ವರ್ಗದ ಪ್ರಮಾಣ ಪತ್ರವನ್ನು ಹೊಂದಿರಬೇಕು.

ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು.18 ರಿಂದ 65 ವರ್ಷದೊಳಗಿರಬೇಕು.ಮಹಿಳೆಯರಿಗೆ ಶೇ. 33 ಹಾಗೂ ದಿವ್ಯಾಂಗದವರಿಗೆ ಶೇ. 5 ರಷ್ಟು ಮೀಸಲಾತಿ ಇರಲಿದ್ದು,, ಆಧಾರ್ ಸಂಖ್ಯೆಗೆ ಮೊಬೈಲ್ ಸಂಖ್ಯೆ ಹಾಗೂ ಬ್ಯಾಂಕ್ ಖಾತೆ ಸೀಡ್ ಆಗಿರಬೇಕು.ಅರ್ಹ ಆಸಕ್ತರು ದಿ: 31-08-2026ರ ಸಂಜೆ 5:30 ರ ಒಳಗಾಗಿ ಮಂಡಳಿಯ ಅಧಿಕೃತ ವೆಬ್‌ಸೈಟ್ www.ksbdb.karnataka.gov.in​ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ವಿವರಗಳಿಗೆ ಸಹಾಯವಾಣಿ (Helpline): 8029605888, 8762249230, 08182 255294 ಹಾಗೂ ಮಂಡಳಿಯ ಫೇಸ್ ಬುಕ್ ಹಾಗೂ ಇನ್ಸ್ಟಾಗ್ರಾಂ ಪುಟಗಳನ್ನು ವೀಕ್ಷಿಸಬಹುದು ಎಂದು ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular