ಬೆಂಗಳೂರು: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವತಿಯಿಂದ ಜುಲೈ 17 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 2.00 ಗಂಟೆಯವರೆಗೆ ಖಾಸಗಿ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳ ನೇಮಕಾತಿಗಾಗಿ ನೇರ ಸಂದರ್ಶನ ಹಮ್ಮಿಕೊಳ್ಳಲಾಗಿದೆ.
10 ನೇ ತರಗತಿ ಉತ್ತೀರ್ಣ, ಪಿ.ಯು.ಸಿ. ಹಾಗೂ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರುವ, 35 ವರ್ಷಗಳ ವಯೋಮಿತಿಯೊಳಗಿನ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಉಪ ಪ್ರಾದೇಶಿಕ ಉದ್ಯೋಗ ವಿನಿಮಯ ಕಚೇರಿ, ಸಿ.ಓ.ಇ. ಕಟ್ಟಡ, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಆವರಣ, ತುಮಕೂರು ರಸ್ತೆ, ಪೀಣ್ಯ, ಬೆಂಗಳೂರು ಅಥವಾ ದೂರವಾಣಿ ಸಂಖ್ಯೆ 8970615380 ಅನ್ನು ಸಂಪರ್ಕಿಸಬಹುದು ಎಂದು ಉಪ ಪ್ರಾದೇಶಿಕ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

