ಹಾಸನ: ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಹಾಸನ ಇಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರು ಸೇರಿ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ಆಯೋಜಿಸಲಾಗಿದೆ.
ಸಹಾಯಕ ಪ್ರಾಧ್ಯಾಪಕರು- 10 ಹುದ್ದೆ, ಹಿರಿಯ ಸ್ಥಾನೀಯ ವೈದ್ಯರು -12, ಟ್ಯೂಟರ್-12 ಹಾಗೂ ರೀಸರ್ಚ್ ಸೈಂಟಿಸ್ಟ್ – 1, Medical – 01 ಹುದ್ದೆಗಳನ್ನು 6 ತಿಂಗಳ ಅವಧಿಗೆ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಮೇ 30 ರಂದು ಬೆಳಗ್ಗೆ 9.30 ರಿಂದ 5.30 ರವರೆಗೆ ಹಿಮ್ಸ್ ನಲ್ಲಿ ನೇರ ಸಂದರ್ಶನ ನಿಗದಿಪಡಿಸಿದೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ನೇರ ಸಂದರ್ಶನಕ್ಕೆ ಅಭ್ಯರ್ಥಿಗಳು ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ ಹಾಗೂ ಮೂಲ ದಾಖಲಾತಿಗಳೊಂದಿಗೆ ಹಾಜರಾಗಲು ತಿಳಿಸಿದೆ.
ಅರ್ಜಿ ನಮೂನೆ, ವಿದ್ಯಾರ್ಹತೆ, ಮೀಸಲಾತಿ ವೃಂದ ಮತ್ತು ನೇಮಕಾತಿ ನಿಯಮಗಳು ಹಾಗೂ ಇತರೆ ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್ www.himshassan.karnataka.gov.in ಸಂಪರ್ಕಿಸಬಹುದಾಗಿದೆ ಎಂದು ಹಿಮ್ಸ್ ಆಡಳಿತಾಧಿಕಾರಿ ತಿಳಿಸಿದ್ದಾರೆ.