HomeKarnatakaಶುಭಸುದ್ದಿ: ಗ್ರಾಮ ಲೆಕ್ಕಿಗರು, ಎಡಿಎಲ್ಆರ್, ಸರ್ವೇಯರ್ ಹುದ್ದೆಗಳಿಗೆ ನೇಮಕಾತಿ

ಶುಭಸುದ್ದಿ: ಗ್ರಾಮ ಲೆಕ್ಕಿಗರು, ಎಡಿಎಲ್ಆರ್, ಸರ್ವೇಯರ್ ಹುದ್ದೆಗಳಿಗೆ ನೇಮಕಾತಿ

ಕಾರವಾರ: ರಾಜ್ಯದಲ್ಲಿ 34 ಸರ್ವೆ ಎಡಿಎಲ್ಆರ್ ಹುದ್ದೆಗಳ ಭರ್ತಿಗೆ ಚಾಲನೆ ನೀಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 364 ಸರ್ವೆಯರ್ ಹುದ್ದೆಗಳು ಖಾಲಿ ಇದ್ದು, ನೇಮಕಾತಿಗೆ ಮುಖ್ಯಮಂತ್ರಿಗಳು ಅನುಮತಿ ನೀಡಿದ್ದಾರೆ. ಸರ್ವೆಯರ್ ಹುದ್ದೆಗಳ ನೇಮಕಾತಿ ಕೂಡ ಜಾರಿಯಲ್ಲಿದೆ ಎಂದು ತಿಳಿಸಿದ್ದಾರೆ.

1091 ಲೈಸೆನ್ಸ್ ಸರ್ವೆಯರ್ ಗಳ ನೇಮಕ ಮಾಡಲಾಗಿದೆ. ಗ್ರಾಮ ಆಡಳಿತಾಧಿಕಾರಿ ಹುದ್ದೆ ಖಾಲಿ ಇವೆ. ಒಂದು ಸಾವಿರ ಗ್ರಾಮ ಲೆಕ್ಕಗರ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದಲ್ಲಿ ತಹಶೀಲ್ದಾರ್ ಕೋರ್ಟ್ ಗಳಲ್ಲಿ ಬಾಕಿ ಉಳಿದ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಕ್ರಮ ವಹಿಸಲಾಗಿದೆ. ಈ ಹಿಂದೆ 212 ದಿನಗಳಲ್ಲಿ ವಿಲೇವಾರಿಯಾಗುತ್ತಿದ್ದ ಪ್ರಕರಣಗಳು ಈಗ 76 ದಿನಗಳಲ್ಲಿ ವಿಲೇವಾರಿ ಆಗುತ್ತಿವೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular