HomeKarnatakaGOOD NEWS : ಶೀಘ್ರದಲ್ಲೇ 2400 ಪೊಲೀಸ್ ಕಾನ್ಸ್ ಟೇಬಲ್ ಗಳ ನೇಮಕ :...

GOOD NEWS : ಶೀಘ್ರದಲ್ಲೇ 2400 ಪೊಲೀಸ್ ಕಾನ್ಸ್ ಟೇಬಲ್ ಗಳ ನೇಮಕ : ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ಶೀಘ್ರದಲ್ಲೇ 2400 ಪೊಲೀಸ್ ಕಾನ್ಸ್ ಟೇಬಲ್ ಗಳ ಹುದ್ದೆಗಳನ್ನು ನೇಮಕ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಶನಿವಾರ ಮೈಸೂರು ರಸ್ತೆಯ ಸಿಎಆರ್ ಮೈದಾನದಲ್ಲಿ ನಡೆದ ಪೊಲೀಸ್ ಸಂಸ್ಮರಣ ದಿನಾಚರಣೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಿ ನಂತರ ಮಾತನಾಡಿದರು.

ಶೀಘ್ರದಲ್ಲೇ 2400 ಪೊಲೀಸ್ ಕಾನ್ಸ್ ಟೇಬಲ್ ಗಳ ಹುದ್ದೆಗಳನ್ನು ನೇಮಕ ಮಾಡಲಾಗುತ್ತದೆ, ಐದು ಸಂಚಾರಿ ಮತ್ತು ಆರು ಮಹಿಳಾ ಪೊಲೀಸ್ ಠಾಣೆ ಸ್ಥಾಪಿಸಲಾಗುತ್ತದೆ. ಗೃಹ 2025 ಯೋಜನೆ ಅಡಿಯಲ್ಲಿ 2, 225 ಪೊಲೀಸ್ ವಸತಿಗಾಗಿ 450ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. ಪೊಲೀಸ್ ಕ್ಯಾಂಟೀನ್ ಕಲ್ಪಿಸಲಾಗಿದೆ,
ಅಧಿಕಾರಿ ಕಚೇರಿ, ನಿರ್ವಹಣೆಗೆ ಕೂಡ ಹಣ ಬಿಡುಗಡೆ ಮಾಡಲಾಗಿದೆ. ರಾಜ್ಯದ ಏಳು ಸ್ಥಳಗಳಲ್ಲಿ ಪೊಲೀಸ್ ಪಬ್ಲಿಕ್ ಸ್ಕೂಲ್ ಓಪನ್ ಮಾಡಲಾಗುತ್ತಿದೆ. ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಪೊಲೀಸ್ ಅಧಿಕಾರಿ, ಸಿಬ್ಬಂದಿ ಹಾಗೂ ಕುಟುಂಬಸ್ಥರಿಗಾಗಿ ಆರೋಗ್ಯ ಭಾಗ್ಯ ಯೋಜನೆಯಡಿ 100 ಕೋಟಿ ಕೊಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular