GOOD NEWS : ಶೀಘ್ರವೇ ‘ಅರಣ್ಯ ಇಲಾಖೆ’ಯಲ್ಲಿ ಖಾಲಿ ಇರುವ ‘6000’ ಹುದ್ದೆಗಳ ನೇಮಕಾತಿ : ಸಚಿವ ಈಶ್ವರ್ ಖಂಡ್ರೆ ಘೋಷಣೆ.!

ಕಲಬುರಗಿ : ಶೀಘ್ರವೇ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 6000 ಹುದ್ದೆಗಳ ನೇಮಕಾತಿ ಮಾಡಲಾಗುತ್ತದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದರು.

ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ಇತ್ತೀಚೆಗೆ 341 ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. 510 ಹುದ್ದೆಗಳ ಭರ್ತಿಗೆ ಪ್ರಕ್ರಿಯೆ ನಡೆಯುತ್ತಿದೆ. ಶೀಘ್ರವೇ 6000 ಕಾಯಂ ಹಾಗೂ ಗುತ್ತಿಗೆ ಆಧಾರಿತ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದರು.

ಅರಣ್ಯ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ನಗರಾಭಿವೃದ್ಧಿ ಇಲಾಖೆ ಮತ್ತು ಕಲಬುರ್ಗಿ ಜಿಲ್ಲಾಡಳಿತ ವತಿಯಿಂದ “ಹಸಿರು ಕಲ್ಯಾಣ ಕರ್ನಾಟಕ” ಯೋಜನೆ ಅಡಿಯಲ್ಲಿ ಕಲಬುರ್ಗಿ ಜಿಲ್ಲೆಯಲ್ಲಿ ಇಂದು ಹಮ್ಮಿಕೊಳ್ಳಲಾದ ರಾಜ್ಯ ಮಟ್ಟದ “ವನಮಹೋತ್ಸವ-2025 ಮತ್ತು ಹಸಿರು ಪಥ, ಕಲಬುರ್ಗಿ ಹಸಿರು ಹೆಜ್ಜೆಗಳು” ಕಾರ್ಯಕ್ರಮಕ್ಕೆ ರಾಜ್ಯಸಭೆ ವಿರೋಧ ಪಕ್ಷದ ನಾಯಕರು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ್ ಖರ್ಗೆ ಅವರು ಸಸಿ ನೆಟ್ಟು ನೀರೆರೆಯುವ ಮೂಲಕ ಚಾಲನೆ ನೀಡಿದರು.

ಮಾನ್ಯ ಖರ್ಗೆ ಸಾಹೇಬರೊಂದಿಗೆ ಭಾಗಿಯಾಗಿ, ಪರಿಸರ ಸಂರಕ್ಷಣೆಯ ಉದ್ದೇಶಕ್ಕಾಗಿ ಸರ್ಕಾರ ಮತ್ತು ನಮ್ಮ ಅರಣ್ಯ ಇಲಾಖೆ ಕೈಗೊಂಡಿರುವ ಯೋಜನೆಗಳ ಬಗ್ಗೆ ವಿವರ ನೀಡಿದೆನು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವರಾದ ಶ್ರೀ Priyank Kharge, ಜನಪ್ರತಿನಿಧಿಗಳು, ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು ಎಂದು ಸಚಿವ ಈಶ್ವರ್ ಟ್ವೀಟ್ ಮಾಡಿದ್ದಾರೆ.

ಅರಣ್ಯ ಇಲಾಖೆ ವತಿಯಿಂದ “ಹಸಿರು ಕಲ್ಯಾಣ ಕರ್ನಾಟಕ” ಯೋಜನೆ ಅಡಿಯಲ್ಲಿ ಕಲಬುರ್ಗಿ ಜಿಲ್ಲೆಯಲ್ಲಿ ಇಂದು ಹಮ್ಮಿಕೊಳ್ಳಲಾದ “ವನಮಹೋತ್ಸವ-2025 ಮತ್ತು ಹಸಿರು ಪಥ, ಕಲಬುರ್ಗಿ ಹಸಿರು ಹೆಜ್ಜೆಗಳು” ಕಾರ್ಯಕ್ರಮಕ್ಕೆ ಚಾಲನೆ ನೀಡಲು ಕಲಬುರ್ಗಿಗೆ ಆಗಮಿಸಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕರು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಅರಣ್ಯ ಇಲಾಖೆ ವತಿಯಿಂದ ಆತ್ಮೀಯವಾಗಿ ಬರಮಾಡಿಕೊಂಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read