ಚಿತ್ರದುರ್ಗ : ರಾಜ್ಯದ ವಿವಿಧ ಕಾರಾಗೃಹಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಮಾಜಿ ಸೈನಿಕರನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಮೇ 29 ರಿಂದ ಜೂನ್ 6 ರವರೆಗೆ ನೇರ ಸಂದರ್ಶನ ಹಮ್ಮಿಕೊಳ್ಳಲಾಗಿದೆ.
ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಯ ವತಿಯಿಂದ ನಡೆಯುವ ಈ ಸಂದರ್ಶನವು ನಿಗದಿಪಡಿಸಿದ ದಿನಾಂಕಗಳಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಬೆಂಗಳೂರಿನ ಗಾಂಧಿ ನಗರದ, ಕಾಳಿದಾಸ ರಸ್ತೆಯಲ್ಲಿರುವ (ಮಹಾ ಬೋಧಿ ಸೊಸೈಟಿ ಪಕ್ಕ, ಫ್ರೀಡಂ ಪಾರ್ಕ್) ‘ಕರ್ನಾಟಕ ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಅಕಾಡೆಮಿ’ಯಲ್ಲಿ ನಡೆಯಲಿದೆ.
ಆಸಕ್ತ ಮಾಜಿ ಸೈನಿಕರು ತಮ್ಮ ಮಾಜಿ ಸೈನಿಕರ ಗುರುತಿನ ಚೀಟಿ ಹಾಗೂ ಸೇನಾ ಸೇವಾ ನಿವೃತ್ತಿ ಪುಸ್ತಕಗಳೊಂದಿಗೆ ಉಪ ನಿರ್ದೇಶಕರು ಹಾಗೂ ಬಂದೀಖಾನೆಗಳ ಮುಖ್ಯ ಅಧೀಕ್ಷಕರಾದ ಪಿ.ಎಸ್. ರಮೇಶ್ ಅವರನ್ನು ಸಂಪರ್ಕಿಸಿ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9632496560 ಅಥವಾ 9480806400 ಅನ್ನು ಸಂಪರ್ಕಿಸಬಹುದು ಎಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉನ್ನತ ಬೌದ್ದಿಕ ಆಸ್ತಿ ಹಕ್ಕುಗಳು: ಐದು ದಿನಗಳ ವಿಶೇಷ ತರಬೇತಿ ಕಾರ್ಯಾಗಾರ
ಚಿತ್ರದುರ್ಗ : ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ಸಾರ್ವಜನಿಕರು ಹಾಗೂ ಆಸಕ್ತರಿಗಾಗಿ ಉನ್ನತ ಬೌದ್ಧಿಕ ಆಸ್ತಿ ಹಕ್ಕುಗಳು (Advanced Intellectual Property Rights – IPR) ಎಂಬ ವಿಷಯದ ಕುರಿತು ಐದು ದಿನಗಳ ವಿಶೇಷ ತರಬೇತಿ ಕಾರ್ಯಾಗಾರ ಆಯೋಜಿಸಿದ್ದು, ಈ ಕಾರ್ಯಾಗಾರವು 2026ರ ಜೂನ್ 16 ರಿಂದ ಜೂನ್ 20 ರವರೆಗೆ ಅಕಾಡೆಮಿಯ ಕಚೇರಿಯಲ್ಲಿ ನಡೆಯಲಿದೆ.
ಈ ಕಾರ್ಯಾಗಾರದಲ್ಲಿ ವಿವಿಧ ಪ್ರತಿಷ್ಠಿತ ಸಂಸ್ಥೆಗಳ ಹೆಸರಾಂತ ವಿಜ್ಞಾನಿಗಳು ಮತ್ತು ತಂತ್ರಜ್ಞಾನಿಗಳು ಉಪನ್ಯಾಸ ನೀಡಲಿದ್ದಾರೆ. ವಿಜ್ಞಾನ ಪದವಿ, ಸ್ನಾತಕೋತ್ತರ ಪದವಿ ಹಾಗೂ ಸಂಶೋಧನಾ ವಿದ್ಯಾರ್ಥಿಗಳು, ಉಪನ್ಯಾಸಕರು, ಪ್ರಾಧ್ಯಾಪಕರು, ವಿಜ್ಞಾನ ಆಸಕ್ತರು ಹಾಗೂ ಕೈಗಾರಿಕೋದ್ಯಮದ ಪ್ರತಿನಿಧಿಗಳು ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳಬಹುದು.
ಆಸಕ್ತರು 2026ರ ಜೂನ್ 12 ರೊಳಗಾಗಿ https://forms.gle/iwHJD5CxnccCfw4u5 ಲಿಂಕ್ ಮೂಲಕ ನೋಂದಾಯಿಸಿಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ಬೆಂಗಳೂರಿನ ವಿದ್ಯಾರಣ್ಯಪುರ ಪೋಸ್ಟ್ ಮೇಜರ್ ಸಂದೀಪ್ ಉನ್ನೀಕೃಷ್ಣನ್ ರಸ್ತೆಯ ದೊಡ್ಡಬೆಟ್ಟಹಳ್ಳಿ ಬಡಾವಣೆ ಬಸ್ ನಿಲ್ದಾಣದ ಹತ್ತಿರದ ಪ್ರೊ.ಯು.ಆರ್.ರಾವ್ ವಿಜ್ಞಾನ ಭವನದಲ್ಲಿರುವ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಕಚೇರಿ ಅಥವಾ ಕಾರ್ಯಾಗಾರದ ಸಂಯೋಜಕರು ಹಾಗೂ ವೈಜ್ಞಾನಿಕಾಧಿಕಾರಿಯಾದ ಎ. ಜಿ. ಉಮೇಶ್ ಅವರ ದೂರವಾಣಿ ಸಂಖ್ಯೆ 9743084194 ಗೆ ಸಂಪರ್ಕಿಸಬಹುದು ಅಥವಾ ಅಕಾಡೆಮಿಯ ವೆಬ್ಸೈಟ್ https://kstacademy.in ಗೆ ಭೇಟಿ ನೀಡಬಹುದು ಎಂದು ಅಕಾಡೆಮಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಆರ್.ಆನಂದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

