‘ಗ್ರಾಮ ಒನ್ ಸೇವಾ’ ಕೇಂದ್ರಗಳಿಗೆ ಫ್ರಾಂಚೈಸಿಗಳ ನೇಮಕ : ಅರ್ಜಿ ಆಹ್ವಾನ

ಬಳ್ಳಾರಿ : ಸರ್ಕಾರದ ಇಡಿಸಿಎಸ್ ನಿರ್ದೇಶನಾಲಯದ ಇ-ಆಡಳಿತ ಇಲಾಖೆಯ ನಿರ್ದೇಶನದಂತೆ ಜಿಲ್ಲೆಯಲ್ಲಿ ಖಾಲಿ ಇರುವ ಗ್ರಾಮ ಒನ್ ಸೇವಾ ಕೇಂದ್ರಗಳಿಗೆ ಫ್ರಾಂಚೈಸಿಗಳನ್ನು ನೇಮಕ ಮಾಡಲು ಆಸಕ್ತ ಅರ್ಹ ವ್ಯಕ್ತಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ.

ಜಿಲ್ಲೆಯಲ್ಲಿ ಒಟ್ಟು 100 ಗ್ರಾಮ ಪಂಚಾಯತಿಗಳಿದ್ದು,182 ಗ್ರಾಮ ಒನ್ ಕೇಂದ್ರಗಳು ಅವಶ್ಯಕತೆ ಇರುತ್ತದೆ. ಪ್ರಸ್ತುತ 146 ಕೇಂದ್ರಗಳು ಪ್ರಾರಂಭಿಸಲಾಗಿದ್ದು, ಇನ್ನುಳಿದ 36 ಗ್ರಾಮ ಒನ್ ಕೇಂದ್ರಗಳನ್ನು ಪ್ರಾರಂಭಿಸಬೇಕಾಗಿರುವುದರಿಂದ, ಸದರಿ 36 ಗ್ರಾಮ – ಒನ್ ಕೇಂದ್ರಗಳಿಗೆ ಫ್ರಾಂಚೈಸಿಯನ್ನು ನೇಮಕ ಮಾಡಲು ಉದ್ದೇಶಿಸಲಾಗಿದೆ.

ಖಾಲಿಯಿರುವ ಗ್ರಾಮ ಒನ್ ಕೇಂದ್ರಗಳ ವಿವರಗಳನ್ನು//https://www.karnatakaone.gov.in ಮತ್ತು https://sevasindhu.karnataka.gov.in/ ವೆಬ್ ಸೈಟ್ ವಿಳಾಸದಲ್ಲಿ ಲಭ್ಯವಿದ್ದು, ನಾಗರೀಕ ಸೇವಾ ಕೇಂದ್ರ ‘ಗ್ರಾಮ ಒನ್ ಫ್ರಾಂಚೈಸಿ ಬಯಸುವವರು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.ಅರ್ಜಿ ಸಲ್ಲಿಸಲು ಕೊನೆಯ ದಿನ ಜೂನ್ 15 ಆಗಿರುತ್ತದೆ ಎಂದು ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಜೂಬೇರಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read