ಬಳ್ಳಾರಿ: ಸರ್ಕಾರದ ಇಡಿಸಿಎಸ್ ನಿರ್ದೇಶನಾಲಯದ ಇ-ಆಡಳಿತ ಇಲಾಖೆಯ ನಿರ್ದೇಶನದಂತೆ ಜಿಲ್ಲೆಯಲ್ಲಿ ಖಾಲಿ ಇರುವ ಕರ್ನಾಟಕ ಒನ್ ಸೇವಾ ಕೇಂದ್ರಗಳಿಗೆ ಫ್ರಾಂಚೈಸಿಗಳನ್ನು ನೇಮಕ ಮಾಡಲು ಆಸಕ್ತ ಅರ್ಹ ಆಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ.
ಜಿಲ್ಲೆಯ ಬಳ್ಳಾರಿ ತಾಲ್ಲೂಕಿನಲ್ಲಿ 03, ಕಂಪ್ಲಿ ತಾಲ್ಲೂಕಿನಲ್ಲಿ 01 ಕರ್ನಾಟಕ – ಒನ್ ಕೇಂದ್ರಗಳಿಗೆ ಫ್ರಾಂಚೈಸಿಯನ್ನು ನೇಮಕ ಮಾಡಲು ಉದ್ದೇಶಿಸಲಾಗಿದೆ.
ಅರ್ಜಿ ಸಲ್ಲಿಸಲು (https://sevasindhuservices.karnataka.gov.in/) ಗೆ ಭೇಟಿ ನೀಡಬಹುದು. ಅರ್ಜಿ ಸಲ್ಲಿಸಲು ಮಾರ್ಚ್ 02 ಕೊನೆಯ ದಿನ ಆಗಿರುತ್ತದೆ ಎಂದು ಜಿಲ್ಲಾಡಳಿತ ಪ್ರಕಟಣೆ ತಿಳಿಸಿದೆ.
ಸಮಾಜ ಕಲ್ಯಾಣ ಇಲಾಖೆ: ಪ್ರಶಸ್ತಿಗಳಿಗಾಗಿ ಅರ್ಜಿ ಆಹ್ವಾನ
ಬಳ್ಳಾರಿ : ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2026-27 ನೇ ಸಾಲಿಗೆ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಜನಾಂಗದವರ ಶ್ರೇಯಸ್ಸಿಗಾಗಿ ಪ್ರೋತ್ಸಾಹಿಸಿ, ಶ್ರಮಿಸಿ, ಗಣನೀಯ ಸೇವೆ ಸಲ್ಲಿಸಿದ ಅರ್ಹ ವ್ಯಕ್ತಿಗಳಿಂದ ಡಾ.ಬಾಬು ಜಗಜೀವನರಾಂ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಏ.05 ರಂದು ಡಾ.ಬಾಬು ಜಗಜೀವನರಾಂ ಅವರ 119ನೇ ಹಾಗೂ ಏ.14 ರಂದು ಡಾ.ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ ಅಂಗವಾಗಿ ಮೇಲ್ಕಂಡ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗುತ್ತದೆ.ಆಸಕ್ತಿಯುಳ್ಳ ಅಭ್ಯರ್ಥಿಗಳು ಅರ್ಜಿಗಳನ್ನು ಮಾ.05 ರೊಳಗಾಗಿ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಕಚೇರಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.08392-267932 ಗೆ ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಚಿದಾನಂದಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

