ಬೆಂಗಳೂರು : ಅನುಕಂಪದ ಆಧಾರದ ಮೇಲೆ ಪ್ರಥಮ ದರ್ಜೆ ಸಹಾಯಕ ಹುದ್ದೆಗಳಿಗೆ ನೇಮಕಾತಿ ನೀಡುವ ಕುರಿತು ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
ಈ ವಿಷಯಕ್ಕೆ ಸಂಬಂಧಿಸಿದಂತೆ ಬೆಂಗಳೂರು ಆಯುಕ್ತಾಯಲಯ ವ್ಯಾಪ್ತಿಯ ವಿಭಾಗೀಯ ಸಹ ನಿರ್ದೇಶಕರು ಹಾಗೂ ಜಿಲ್ಲಾ ಉಪನಿರ್ದೇಶಕರುಗಳ ಮುಖಾಂತರ ಅನುಕಂಪದ ಆಧಾರದ ಮೇಲೆ ಪ್ರಥಮ ದರ್ಜೆ ಸಹಾಯಕ ಹುದ್ದೆಗಳಿಗೆ ನೇಮಕಾತಿ ನೀಡುವ ಕುರಿತು ಶಿಫಾರಸ್ಸು ಮಾಡಿ ಸಲ್ಲಿಸಿರುವ ಪ್ರಸ್ತಾವನೆಗಳನ್ನು ಪರಿಗಣಿಸಿ ನೇಮಕಾತಿಗೆ ಅನುಮೋದನೆ ನೀಡಲಾಗಿದೆ.
ಈ ಹಿನ್ನೆಲೆಯಲ್ಲಿ ನೇಮಕಾತಿ ಆದೇಶ ಹೊರಡಿಸುವ ಸಲುವಾಗಿ ಕೌನ್ಸಿಲಿಂಗ್ ಮುಖಾಂತರ ಸ್ಥಳ ನಿಯುಕ್ತಿಗೊಳಿಸಲು ತೀರ್ಮಾನಿಸಲಾಗಿದ್ದು, ದಿನಾಂಕ:22-09-2025 ರಂದು ಬೆಳಿಗ್ಗೆ 11.00 ಗಂಟೆಗೆ ಆಯುಕ್ತರ ಕಛೇರಿ, ಶಾಲಾ ಶಿಕ್ಷಣ ಇಲಾಖೆ, ನೃಪತುಂಗ ರಸ್ತೆ, ಬೆಂಗಳೂರು-560001 ಇಲ್ಲಿ ಕೌನ್ಸಿಲಿಂಗ್ ನಡೆಯಲಿದ್ದು, ಅರ್ಜಿದಾರರು ಖುದ್ದು ಹಾಜರಾಗಿ ಕೌನ್ಸಿಲಿಂಗ್ ನಲ್ಲಿ ಭಾಗವಹಿಸಿ ಸ್ಥಳ ಆಯ್ಕೆ ಮಾಡಿಕೊಳ್ಳಲು ಸೂಚಿಸಿದೆ. ಹಾಗೂ ಈ ಕುರಿತು ಅಭ್ಯರ್ಥಿಗಳಿಗೆ ಸೂಚನೆ ನೀಡಿ ಅಗತ್ಯ ಕ್ರಮವಹಿಸಲು ಸಂಬಂಧಿಸಿದ ಉಪನಿರ್ದೇಶಕರು (ಆಡಳಿತ) ರವರು ಕ್ರಮವಹಿಸಲು ತಿಳಿಸಿದೆ. ಅರ್ಜಿದಾರರು ಕೌನ್ಸಿಲಿಂಗ್ ಸಂದರ್ಭದಲ್ಲಿ ಅಂಗೀಕೃತ ಭಾವಚಿತ್ರ ಸಹಿತ ಗುರುತಿನ ಚೀಟಿ ಯನ್ನು ಹಾಜರುಪಡಿಸತಕ್ಕದ್ದು ಎಂದು ತಿಳಿಸಿದೆ.


