BIG NEWS : ‘ಗ್ರಾಮ ಆಡಳಿತ ಅಧಿಕಾರಿ’ ಹುದ್ದೆಗಳ ನೇಮಕಾತಿ, ಜ.6 ರಂದು ಮೂಲ ದಾಖಲೆಗಳ ಪರಿಶೀಲನೆ| V.A Recruitment 2024

ಬಳ್ಳಾರಿ : ಜಿಲ್ಲೆಯ ಕಂದಾಯ ಘಟಕದಲ್ಲಿ ಖಾಲಿ ಇರುವ 17 ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳಿಗೆ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಲಾಗಿದ್ದು, ಆಯ್ಕೆಯಾಗಿರುವ ಅಭ್ಯರ್ಥಿಗಳು ತಮ್ಮ ಮೂಲ ದಾಖಲೆಗಳೊಂದಿಗೆ ಜ.06 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ರೈಲ್ವೆ ಸ್ಟೇಷನ್ ಎದುರುಗಡೆಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆಯುವ ದಾಖಲೆ ಪರಿಶೀಲನೆಗೆ ಹಾಜರಾಗಬೇಕು.

ಬಳ್ಳಾರಿ ಜಿಲ್ಲೆಯಲ್ಲಿ ಖಾಲಿ ಇರುವ 17 ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳನ್ನು ನೇರ ನೇಮಕಾತಿಯ ಮೂಲಕ ಭರ್ತಿ ಮಾಡಲು ಮೆರಿಟ್ ಕಮ್ ರೋಸ್ಟರ್ ಆಧಾರದ ಮೇಲೆ ಬಳ್ಳಾರಿ ಜಿಲ್ಲೆಯ ವೆಬ್ಸೈಟ್ http://bellary.nic.in ನಲ್ಲಿ ಪ್ರಕಟಿಸಲಾಗಿದೆ ಎಂದು ಗ್ರಾಮ ಆಡಳಿತ ಅಧಿಕಾರಿಗಳ ನೇರ ನೇಮಕಾತಿ ಆಯ್ಕೆ ಪ್ರಾಧಿಕಾರದ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.

ಒಟ್ಟು 30 ಜಿಲ್ಲೆಗಳು ಸಹ ತಮ್ಮ ತಮ್ಮ ಜಿಲ್ಲಾ ಅಧಿಕೃತ ವೆಬ್ಸೈಟ್ಗಳಲ್ಲಿ, ತಮ್ಮ ಜಿಲ್ಲೆಯಲ್ಲಿ ಭರ್ತಿ ಮಾಡಲಿರುವ ಹುದ್ದೆಗಳಿಗೆ ಅನುಗುಣವಾಗಿ 1:3 ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಬಿಡುಗಡೆ ಮಾಡಿವೆ. ಅಭ್ಯರ್ಥಿಗಳು ತಾವು ಅರ್ಜಿ ಸಲ್ಲಿಸಿದ ಜಿಲ್ಲೆಯ ವೆಬ್ಸೈಟ್ಗೆ ಭೇಟಿ ನೀಡುವ ಮೂಲಕ ಅರ್ಹತಾ ಪಟ್ಟಿ ಚೆಕ್ ಮಾಡಿಕೊಳ್ಳಬಹುದಾಗಿದೆ.

ಹೇಗೆ ಚೆಕ್ ಮಾಡಬಹುದು..?

• ಒಂದು ವೇಳೆ ನೀವು ಮಂಡ್ಯ ಜಿಲ್ಲೆಯ ಅಭ್ಯರ್ಥಿಗಳಾಗಿದ್ದಲ್ಲಿ manday.nic.in ಗೆ ಭೇಟಿನೀಡಿ.
• ಬಳಿಕ ಮುಖಪುಟದಲ್ಲಿ ನೇಮಕಾತಿ ಮೆನು ಆಯ್ಕೆ ಮಾಡಿ.
• – ನಂತರ ಓಪನ್ ಆಗುವ ವೆಬ್ಪೇಜ್ನಲ್ಲಿ ತಾತ್ಕಾಲಿಕ ಆಯ್ಕೆಪಟ್ಟಿ ಲಿಂಕ್ ಇರುತ್ತದೆ.
• – ನಿಮ್ಮ ಹೆಸರು ಇರುವ ಬಗ್ಗೆ ಚೆಕ್ ಮಾಡಿಕೊಳ್ಳಿ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read