HomeKarnatakaBIG NEWS: ಮುಂದಿನ ಆದೇಶದವರೆಗೆ ನೇರ ನೇಮಕಾತಿಗೆ ಯಾವುದೇ ಅಧಿಸೂಚನೆ ಹೊರಡಿಸದಂತೆ ಸೂಚನೆ

BIG NEWS: ಮುಂದಿನ ಆದೇಶದವರೆಗೆ ನೇರ ನೇಮಕಾತಿಗೆ ಯಾವುದೇ ಅಧಿಸೂಚನೆ ಹೊರಡಿಸದಂತೆ ಸೂಚನೆ

ಬೆಂಗಳೂರು: ರಾಜ್ಯ ಸಿವಿಲ್ ಸೇವೆಗಳಲ್ಲಿನ ಹುದ್ದೆಗಳ ನೇಮಕಾತಿಗಾಗಿ ಹೊಸದಾಗಿ ಅಧಿಸೂಚನೆ ಹೊರಡಿಸುವುದನ್ನು ತಡೆಹಿಡಿಯುವಂತೆ ಸರ್ಕಾರದ ಅಧೀನ ಕಾರ್ಯದರ್ಶಿ ಇಲಾಖೆ(ಸೇವಾ ನಿಯಮಗಳು-1) ಸೂಚನೆ ನೀಡಿದ್ದಾರೆ.

ದಿನಾಂಕ: 28.10.2024 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡ ನಿರ್ಣಯದಂತೆ ರಾಜ್ಯ ಸಿವಿಲ್ ಸೇವೆಗಳಲ್ಲಿನ ಮೀಸಲಾತಿ ಅನ್ವಯವಾಗುವ ವೃಂದಗಳಲ್ಲಿನ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಹೊಸದಾಗಿ ಯಾವುದೇ ಅಧಿಸೂಚನೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೂ ಹೊರಡಿಸಬಾರದೆಂದು ಸೂಚಿಸಲಾಗಿದೆ.

ಈ ದಿನಾಂಕದ ಪೂರ್ವದಲ್ಲಿ ನೇರ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದ್ದಲ್ಲಿ ಅಥವಾ ಆಯ್ಕೆ ಪ್ರಕ್ರಿಯೆ ಪ್ರಾರಂಭಗೊಂಡಿದ್ದಲ್ಲಿ ಅಂತಹ ನೇಮಕಾತಿಗಳಿಗೆ ಹೊರಡಿಸಲಾಗಿದ್ದ ಅಧಿಸೂಚನೆಯನ್ವಯವೇ ಪೂರ್ಣಗೊಳಿಸಬಹುದಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೇಲ್ಕಂಡ ಸೂಚನೆಗಳನ್ನು ಎಲ್ಲಾ ಆಯ್ಕೆ ಪ್ರಾಧಿಕಾರಗಳು/ನೇಮಕಾತಿ ಪ್ರಾಧಿಕಾರಗಳು ಕಟ್ಟುನಿಟ್ಟಾಗಿ ಪಾಲಿಸತಕ್ಕದು ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular