HomeKarnatakaಕೆಪಿಟಿಸಿಎಲ್, ಎಸ್ಕಾಂಗಳಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ: ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ದಿನಾಂಕ ವಿಸ್ತರಣೆ

ಕೆಪಿಟಿಸಿಎಲ್, ಎಸ್ಕಾಂಗಳಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ: ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ದಿನಾಂಕ ವಿಸ್ತರಣೆ

ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ(ಕೆಪಿಟಿಸಿಎಲ್) ಮತ್ತು ಎಸ್ಕಾಂಗಳಲ್ಲಿ ಖಾಲಿ ಇರುವ ಕಿರಿಯ ಸ್ಟೇಷನ್ ಪರಿಚಾರಕ, ಕಿರಿಯ ಪವರ್ ಮ್ಯಾನ್ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಇ -ಸಹಿ ಮಾಡಿ ಅಂಚೆ ಚಲನ್ ಪಡೆಯುವ ಮತ್ತು ಅರ್ಜಿ ಶುಲ್ಕ ಪಾವತಿಸುವ ದಿನಾಂಕವನ್ನು ಕ್ರಮವಾಗಿ ಡಿಸೆಂಬರ್ 5 ಮತ್ತು 10ರವರೆಗೆ ವಿಸ್ತರಿಸಲಾಗಿದೆ.

ಕೆಪಿಟಿಸಿಎಲ್ ಮತ್ತು ಎಸ್ಕಾಂಗಳಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಕಳೆದ ಅಕ್ಟೋಬರ್ 14ರಂದು ಉದ್ಯೋಗ ಪ್ರಕಟಣೆ ನೀಡಲಾಗಿತ್ತು. ಅದರಂತೆ ನೇಮಕಾತಿಗೆ ಅರ್ಜಿ ಸಲ್ಲಿಸಲು ನವೆಂಬರ್ 20, ಅರ್ಜಿ ಶುಲ್ಕ ಪಾವತಿಸಲು ನವೆಂಬರ್ 25 ಕೊನೆಗೆ ದಿನಾಂಕವೆಂದು ನಿಗದಿಪಡಿಸಲಾಗಿತ್ತು.

ಅಭ್ಯರ್ಥಿಗಳು ಆನ್ಲೈನ್ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಹಂತ ಹಂತವಾಗಿ ಮಾಡಬೇಕಿದ್ದು, ಅರ್ಜಿ ನಮೂನೆಯಲ್ಲಿ ಮಾಹಿತಿ ಸಲ್ಲಿಕೆ, ಅರ್ಜಿ ಶುಲ್ಕ ಪಾವತಿಗೆ ಅಂಚೆ ಇಲಾಖೆಯ ಚಲನ್ ಡೌನ್ಲೋಡ್ ಮಾಡಿಕೊಂಡು ಅರ್ಜಿ ಶುಲ್ಕ ಪಾವತಿಸಬೇಕಿದೆ. ಇದಕ್ಕು ಮೊದಲು ಅಭ್ಯರ್ಥಿಗಳು ಇ- ಸಹಿ ಪ್ರಕ್ರಿಯೆ ಪೂರ್ಣಗೊಳಿಸಬೇಕಿದೆ. ಆದರೆ, ನಿಗದಿಪಡಿಸಿದ ಅವಧಿಯಲ್ಲಿ ಈ ಪ್ರಕ್ರಿಯೆ ಪೂರ್ಣಗೊಳಿಸಲು ಸಾಧ್ಯವಾಗದ ಕಾರಣ ಅನೇಕ ಅಭ್ಯರ್ಥಿಗಳ ಮನವಿ ಮೇರೆಗೆ ದಿನಾಂಕ ವಿಸ್ತರಿಸಲಾಗಿದೆ. ಅಭ್ಯರ್ಥಿಗಳ ಮನವಿಯನ್ನು ಪರಿಗಣಿಸಿ ಅರ್ಜಿ ಸಲ್ಲಿಕೆಯ ಮೊದಲೆರಡು ಹಂತ ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಸೀಮಿತಗೊಳಿಸಿ ಇ- ಸಹಿ ಪ್ರಕ್ರಿಯೆ, ಅಂಚೆ ಕಚೇರಿ ಚಲನ್ ಡೌನ್ಲೋಡ್ ಮತ್ತು ಅರ್ಜಿ ಶುಲ್ಕ ಪಾವತಿ ದಿನಾಂಕಗಳನ್ನು ವಿಸ್ತರಿಸಲಾಗಿದೆ ಎಂದು ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular