BIG NEWS: 13 ಸಾವಿರ ಶಿಕ್ಷಕರ ನೇಮಕಾತಿಗೆ ಮತ್ತೆ ವಿಘ್ನ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ

ಬೆಂಗಳೂರು: 13,000ಕ್ಕೂ ಅಧಿಕ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ ಮತ್ತೆ ವಿಘ್ನ ಎದುರಾಗಿದೆ. ಹೈಕೋರ್ಟ್ ನಿಂದ ನೇಮಕಾತಿ ಪ್ರಕ್ರಿಯೆ ಮುಂದುವರೆಸಲು ನೀಡಲಾಗಿದ್ದ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದೆ. ಬಾಕಿ ನೇಮಕಾತಿ ಪತ್ರ ವಿತರಿಸದಂತೆ ಸೂಚನೆ ನೀಡಲಾಗಿದೆ.

ಹೈಕೋರ್ಟ್ ನಿರ್ದೇಶನದ ಅನ್ವಯ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಈಗಾಗಲೇ ಆಯ್ಕೆಪಟ್ಟಿಯಲ್ಲಿ ಹೆಸರಿದ್ದ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ನೀಡಿದ್ದು, ಅವರು ಕೆಲಸಕ್ಕೆ ಹಾಜರಾಗಿದ್ದಾರೆ. ಇನ್ನು ಶೇಕಡ 20ರಷ್ಟು ಅಭ್ಯರ್ಥಿಗಳಿಗೆ ಶಿಕ್ಷಣ ಇಲಾಖೆ ನೇಮಕಾತಿ ಪತ್ರ ವಿತರಿಸಬೇಕಿದೆ. ಅಷ್ಟರಲ್ಲಿ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿರುವ ಹಿನ್ನೆಲೆಯಲ್ಲಿ  ಆ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ವಿತರಿಸದಂತೆ ಇಲಾಖೆಯಿಂದ ಡಿಡಿಪಿಐ ಗಳಿಗೆ ಮೌಖಿಕ ಆದೇಶ ನೀಡಲಾಗಿದೆ.

2023ರ ಅ. 12ರಂದು ಹೈಕೋರ್ಟ್ ವಿಭಾಗೀ ಪೀಠ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಮುಂದುವರೆಸಲು ಆದೇಶ ನೀಡಿದ್ದು, ಹೈಕೋರ್ಟ್ ವಿಭಾಗಿಯ ಪೀಠವು ಏಕಸದಸ್ಯ ಪೀಠದ ಆದೇಶಕ್ಕೆ ತಡೆ ನೀಡದೆ ಕೇವಲ ನೇಮಕಾತಿ ಪ್ರಕ್ರಿಯೆ ಮುಂದುವರಿಸಲು ಸರ್ಕಾರಕ್ಕೆ ಅವಕಾಶ ನೀಡಿತ್ತು. ಅದನ್ನು ಪ್ರಶ್ನಿಸಿ ವಿಶೇಷ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ಗೆ ಸಲ್ಲಿಸಲಾಗಿದ್ದು, ಮೇಲ್ಮನವಿ ಪರಿಶೀಲಿಸಿದ ಸುಪ್ರೀಂಕೋರ್ಟ್ ಹೈಕೋರ್ಟ್ ಆದೇಶಕ್ಕೆ ತಡೆಯಾಜ್ಞೆ ನೀಡಿದೆ ಎಂದು ಹೇಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read