HomeKarnatakaBIG NEWS: ಒಳ ಮೀಸಲಾತಿ ನಿರ್ಧರಿಸುವವರೆಗೆ ನೇರ ನೇಮಕಾತಿ ಮಾಡದಿರಲು ಆದೇಶ: ಹೊಸ ಅಧಿಸೂಚನೆ ರದ್ದು,...

BIG NEWS: ಒಳ ಮೀಸಲಾತಿ ನಿರ್ಧರಿಸುವವರೆಗೆ ನೇರ ನೇಮಕಾತಿ ಮಾಡದಿರಲು ಆದೇಶ: ಹೊಸ ಅಧಿಸೂಚನೆ ರದ್ದು, ಶಿಸ್ತು ಕ್ರಮಕ್ಕೆ ಸರ್ಕಾರದಿಂದ ಸುತ್ತೋಲೆ

ಬೆಂಗಳೂರು: ರಾಜ್ಯ ಸಿವಿಲ್ ಸೇವೆಗಳಲ್ಲಿ ಒಳ ಮೀಸಲಾತಿ ನಿರ್ಧಾರವಾಗುವವರೆಗೆ ನೇರ ನೇಮಕಾತಿ ಮಾಡದಿರಲು 2024ರ ನವೆಂಬರ್ 25 ರಂದು ಆದೇಶ ಹೊರಡಿಸಲಾಗಿದೆ. ಹೀಗಿದ್ದರೂ ಕೆಲವು ನೇಮಕಾತಿ ಪ್ರಾಧಿಕಾರಗಳು ಹೊಸ ಅಧಿಸೂಚನೆ ಹೊರಡಿಸಿದ್ದು, ಅಂತಹ ಅಧಿಸೂಚನೆಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಪಡಿಸಿ ಸರ್ಕಾರ ಸುತ್ತೋಲೆ ಹೊರಡಿಸಿದೆ.

ಒಳ ಮೀಸಲಾತಿ ನಿರ್ಧರಿಸುವವರೆಗೆ ಮೀಸಲಾತಿ ಅನ್ವಯವಾಗುವ ಹುದ್ದೆಗಳಿಗೆ ಮುಂದಿನ ಆದೇಶದವರೆಗೆ ಯಾವುದೇ ನೇರ ನೇಮಕಾತಿ ಅಧಿಸೂಚನೆ ಹೊರಡಿಸಬಾರದು ಎಂದು 2024ರ ನವೆಂಬರ್ 25 ರಂದು ಅಧಿಸೂಚನೆ ಹೊರಡಿಸಲಾಗಿದ್ದರೂ ಕೆಲವು ನೇಮಕಾತಿ ಪ್ರಾಧಿಕಾರಗಳು ನಿಯಮ ಉಲ್ಲಂಘಿಸಿ ನೇರ ನೇಮಕಾತಿಗೆ ಹೊಸ ಅಧಿಸೂಚನೆ ಹೊರಡಿಸಲಾಗಿದೆ.

ಇದು ಸರ್ಕಾರ ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ನವೆಂಬರ್ 25 ರ ನಂತರ ನೇರ ನೇಮಕಾತಿಗೆ ಯಾವುದೇ ಹೊಸ ಅಧಿಸೂಚನೆ ಹೊರಡಿಸಿದ್ದಲ್ಲಿ ತಕ್ಷಣ ಜಾರಿಗೆ ಬರುವಂತೆ ರದ್ದುಪಡಿಸಲು ಸೂಚಿಸಲಾಗಿದೆ. ನೇಮಕಾತಿ ಪ್ರಾಧಿಕಾರಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಆಯಾ ಆಡಳಿತ ಇಲಾಖೆ ಕಾರ್ಯದರ್ಶಿಗಳಿಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಸೂಚನೆ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular