ವಿವಿಧ ಇಲಾಖೆಗಳಲ್ಲಿ ನೇಮಕಾತಿ: ಸಿಎಂ ಸಿಹಿ ಸುದ್ದಿ

ಬೆಂಗಳೂರು: ವಿವಿಧ ಇಲಾಖೆಯಲ್ಲಿ 2023-24ನೇ ಸಾಲಿನಲ್ಲಿ 384 ಹುದ್ದೆಗಳು, 2024- 25 ನೇ ಸಾಲಿನಲ್ಲಿ 80 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಭರ್ತಿಗೆ ಲೋಕಸಭಾ ಆಯೋಗಕ್ಕೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ವಿಧಾನ ಪರಿಷತ್ ನಲ್ಲಿ ಬಿಜೆಪಿಯ ಹನುಮಂತ ನಿರಾಣಿ ಅವರ ಪ್ರಶ್ನೆಗೆ ಉತ್ತರ ನೀಡಿದ ಸಿಎಂ, ಗೆಜೆಟೆಡ್ ಪ್ರೊಬೇಷನರಿ ಗ್ರೂಪ್ ಎ ಮತ್ತು ಗ್ರೂಪ್ ಬಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಗೆ ಮೂರು ವರ್ಷಗಳ ವಯೋಮಿತಿ ಸಡಿಲಿಕೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಕಳೆದ 5 ವರ್ಷದಲ್ಲಿ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 8225 ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದ್ದು, 5333 ಅಭ್ಯರ್ಥಿಗಳನ್ನು ಲೋಕಸೇವಾ ಆಯೋಗದಿಂದ ಆಯ್ಕೆ ಮಾಡಿ ಸಂಬಂಧಿಸಿದ ಇಲಾಖೆಗೆ ರವಾನಿಸಲಾಗಿದೆ ಎಂದು ಕಾಂಗ್ರೆಸ್ ನ ಪ್ರಕಾಶ್ ರಾಥೋಡ್ ಪ್ರಶ್ನೆಗೆ ಉತ್ತರ ನೀಡಿದ್ದಾರೆ. ಈ ವರ್ಷ 1423 ಹುದ್ದೆಗಳ ನೇಮಕಾತಿಗೆ ಲೋಕಸೇವಾ ಆಯೋಗಕ್ಕೆ ಪ್ರಸ್ತಾವನೆ ಕಳುಹಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read