HomeKarnatakaಮಹಾಮಳೆಯಿಂದ ತತ್ತರಿಸಿದ ಜನತೆಗೆ ಶಾಕ್: ಇನ್ನೂ ಒಂದು ವಾರ ಭಾರಿ ಮಳೆ ಮುನ್ಸೂಚನೆ

ಮಹಾಮಳೆಯಿಂದ ತತ್ತರಿಸಿದ ಜನತೆಗೆ ಶಾಕ್: ಇನ್ನೂ ಒಂದು ವಾರ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಇನ್ನೂ ಒಂದು ವಾರ ಧಾರಾಕಾರ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜುಲೈ 19, 20 ರಂದು ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.

ಜುಲೈ 19, 20 ರಂದು ಕೊಡಗು ಜಿಲ್ಲೆಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಬೆಳಗಾವಿ, ಧಾರವಾಡ, ಯಾದಗಿರಿ, ಹಾಸನ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜುಲೈ 21ರಂದು ಕರಾವಳಿ ಜಿಲ್ಲೆಗಳು, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದ್ದು, ಕೊಡಗು, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜುಲೈ 22 ಮತ್ತು 23 ರಂದು ಕರಾವಳಿ ಜಿಲ್ಲೆಗಳು, ಬೆಳಗಾವಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ರಾಜ್ಯದ ವಿವಿಧೆಡೆ ಇಂದು ಕೂಡ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಶಿವಮೊಗ್ಗ ಜಿಲ್ಲೆಗಳಲ್ಲಿ ನಿರಂತರ ಗಾಳಿಯೊಂದಿಗೆ ಧಾರಾಕಾರ ಮಳೆ ಮುಂದುವರೆಯುವ ಕಾರಣ ರೆಡ್ ಅಲರ್ಟ್ ನೀಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular