HomeKarnatakaರೋಗಿಗಳ ಎದುರು ಡ್ಯಾನ್ಸ್ ಮಾಡಿದ 38 ವೈದ್ಯ ವಿದ್ಯಾರ್ಥಿಗಳು ಅಮಾನತು

ರೋಗಿಗಳ ಎದುರು ಡ್ಯಾನ್ಸ್ ಮಾಡಿದ 38 ವೈದ್ಯ ವಿದ್ಯಾರ್ಥಿಗಳು ಅಮಾನತು

ಗದಗ: ಸರ್ಕಾರಿ ಆಸ್ಪತ್ರೆಯ ಆಪರೇಷನ್ ಥಿಯೇಟರ್ ನಲ್ಲಿ ವೈದ್ಯನೊಬ್ಬ ಪ್ರೀ ವೆಡ್ಡಿಂಗ್ ಫೋಟೋಶೂಟ್ ಮಾಡಿದ ಘಟನೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ಬೆನ್ನಲ್ಲೇ ಗದಗದ ಜಿಮ್ಸ್ ಆಸ್ಪತ್ರೆಯ ವೈದ್ಯಕೀಯ ವಿದ್ಯಾರ್ಥಿಗಳು ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು ಪೇಚಿಗೆ ಸಿಲುಕಿದ್ದಾರೆ.

ರೋಗಿಗಳ ಎದುರಲ್ಲೇ ಕನ್ನಡ, ತಮಿಳು, ತೆಲುಗು, ಹಿಂದಿ ಹಾಡುಗಳಿಗೆ ವೈದ್ಯಕೀಯ ವಿದ್ಯಾರ್ಥಿಗಳು ಡ್ಯಾನ್ಸ್ ಮಾಡಿದ್ದಾರೆ. ಇದು ವೈರಲ್ ಆಗುತ್ತಿದ್ದಂತೆ ಜಿಮ್ಸ್ ನಿರ್ದೇಶಕ ಡಾ. ಬಸವರಾಜ ಬೊಮ್ಮನಹಳ್ಳಿ ಅವರು 38 ವಿದ್ಯಾರ್ಥಿಗಳನ್ನು ಒಂದು ವಾರ ಅಮಾನತು ಮಾಡಿ ಆದೇಶಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

‘ಪ್ರೇಮಲೋಕ’ ಸೇರಿದಂತೆ ಅನೇಕ ಚಿತ್ರಗಳ ಹಾಡಿಗೆ ವಿದ್ಯಾರ್ಥಿಗಳು ಹೆಜ್ಜೆ ಹಾಕಿದ್ದಾರೆ. ಆಸ್ಪತ್ರೆಯ ತೀವ್ರ ನಿಗಾ ಘಟಕ, ಶಿಶು ಆರೈಕೆ ಕೇಂದ್ರ, ಚೀಟಿ ಬರೆಯುವ ಸ್ಥಳದಲ್ಲಿ ಡ್ಯಾನ್ಸ್ ಮಾಡಿದ್ದು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹುಚ್ಚಾಟಕ್ಕೆ ಬೇರೆ ಜಾಗ ಸಿಗಲಿಲ್ಲವೇ ಎಂದು ಆಕ್ರೋಶ ವ್ಯಕ್ತವಾಗಿದ್ದು, ಈ ಹಿನ್ನೆಲೆಯಲ್ಲಿ ಜಿಮ್ಸ್ ನಿರ್ದೇಶಕ ಡಾ. ಬಸವರಾಜ ಅವರು ಒಂದು ವಾರ ಕಾಲ ವಿದ್ಯಾರ್ಥಿಗಳನ್ನು ಅಮಾನತು ಮಾಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular