HomeKarnataka'ರೀಲ್ಸ್ ರಾಣಿ' ಸೋನುಗೌಡಗೆ ಜಾಮೀನು ಮಂಜೂರು ; ಇಂದು ಜೈಲಿನಿಂದ ಬಿಡುಗಡೆ.!

‘ರೀಲ್ಸ್ ರಾಣಿ’ ಸೋನುಗೌಡಗೆ ಜಾಮೀನು ಮಂಜೂರು ; ಇಂದು ಜೈಲಿನಿಂದ ಬಿಡುಗಡೆ.!

ಬೆಂಗಳೂರು : ಕಾನೂನು ಬಾಹಿರವಾಗಿ ಮಗು ದತ್ತು ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ‘ಬಿಗ್ ಬಾಸ್’ ಸ್ಪರ್ಧಿ ಸೋನು ಶ್ರೀನಿವಾಸ ಗೌಡರಿಗೆ ಜಾಮೀನು ಸಿಕ್ಕಿದ್ದು, ಇಂದು ಮಧ್ಯಾಹ್ನ ಅಥವಾ ಸಂಜೆ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.

ಸೋನು ಶ್ರೀನಿವಾಸ ಗೌಡಗೆ ಜಾಮೀನು ಮಂಜೂರು ಮಾಡಿ ಬೆಂಗಳೂರು ಗ್ರಾಮಾಂತರ ಪ್ರಧಾನ ಜಿಲ್ಲಾ ನ್ಯಾಯಾಲಯ ಆದೇಶ ಹೊರಡಿಸಿದ್ದು, ಇಂದು ಮಧ್ಯಾಹ್ನ ಅಥವಾ ಸಂಜೆ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.
ಮಗುವನ್ನು ಅಕ್ರಮವಾಗಿ ದತ್ತು ಪಡೆದ ಪ್ರಕರಣದಲ್ಲಿ ರೀಲ್ಸ್ ಸ್ಟಾರ್ ಸೋನು ಶ್ರೀನಿವಾಸ್ ಗೌಡರನ್ನು ಬಂಧಿಸಲಾಗಿತ್ತು, ವಿಚಾರಣೆ ನಡೆಸಿದ ಬೆಂಗಳೂರಿನ ಸಿಜೆಎಂ ನ್ಯಾಯಾಲಯ ಸೋನು ಗೌಡಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿತ್ತು .

ನಂತರ, ಸೋನು ಶ್ರೀನಿವಾಸ್ ಗೌಡ ಅವರನ್ನು ಪರಪ್ಪನ ಅಗ್ರಹಾರ ಜೈಲಿಗೆ ರವಾನಿಸಲಾಗಿತ್ತು. ಸೋನುಗೌಡ ಅವರು ಜಾಮೀನು ಮಂಜೂರು ಮಾಡುವಂತೆ ಅರ್ಜಿ ಸಲ್ಲಿಕೆ ಮಾಡಿದ್ದರು. ಈ ಅರ್ಜಿಯನ್ನು ವಿಚಾರಣೆ ಮಾಡಿದ ಬೆಂಗಳೂರು ಗ್ರಾಮಾಂತರ ಸಿಜೆಎಂ ಕೋರ್ಟ್ ಹೆಣ್ಣು ಮಗುವಿನ ಕಾನೂನುಬಾಹಿರ ದತ್ತು ಪ್ರಕರಣದಲ್ಲಿ ಸೋನು ಶ್ರೀನಿವಾಸ್ ಗೌಡ ಅವರಿಗೆ ಜಾಮೀನು ಮಂಜೂರು ಮಾಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚೈಲ್ಡ್ ವೇಲ್ ಫೇರ್ ಕಮಿಟಿ ಅಧಿಕಾರಿಗಳು ಬ್ಯಾಡರಹಳ್ಳಿ ದೂರು ನೀಡಿದ ದೂರಿನ ಹಿನ್ನೆಲೆ ಅಂದ್ರಹಳ್ಳಿ ನಿವಾಸದಲ್ಲಿ ಸೋನುಗೌಡ ಅವರನ್ನು ಪೊಲೀಸರು ಬಂಧಿಸಿದ್ದರು. ಉತ್ತರ ಕರ್ನಾಟಕ ಮೂಲದ ಎಂಟು ವರ್ಷದ ಬಾಲಕಿಯನ್ನು ದತ್ತು ಪಡೆದಿರುವುದಾಗಿ ಸೋನು ಸೋಷಿಯಲ್ ಮೀಡಿಯಾದಲ್ಲಿ ಪ್ರಚಾರ ಮಾಡಿದ್ದರು. ಸೋನುಗೌಡ ಅವರು ಮಗುವನ್ನು ದತ್ತು ಪಡೆಯಲು ಅನುಸರಿಬೇಕಾದ ಕಾನೂನಾತ್ಮಕ ಪ್ರಕ್ರಿಯೆಗಳನ್ನು ಸರಿಯಾಗಿ ಮಾಡಿಲ್ಲ ಎಂಬ ಆರೋಪ ಕೇಳಿಬಂದಿದೆ.ಈ ಹಿನ್ನೆಲೆ ರೀಲ್ಸ್ ಸ್ಟಾರ್ ಸೋನು ಶ್ರೀನಿವಾಸ್ ಗೌಡ ವಿರುದ್ಧ ಎಫ್ ಐ ಆರ್ ದಾಖಲಾಗಿದ್ದು, ಸೋನು ಗೌಡರನ್ನು ಬಂಧಿಸಲಾಗಿತ್ತು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular