ಬಳ್ಳಾರಿ: ಅಪಾಯದ ಸ್ಥಳದಲ್ಲಿ ರೀಲ್ಸ್ ಮಾಡಿ ಹುಚ್ಚಾಟ ಮೆರೆಯುತ್ತಿದ್ದ ಯುವಕನನ್ನು ಬಳ್ಳಾರಿ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ಬಳ್ಳಾರಿಯ ಬ್ರೂಸ್ ಪೇಟೆ ಪೊಲೀಸರು ವಿಶ್ವನಾಥ್ (29) ಎಂಬಾತನನ್ನು ಬಂಧಿಸಿದ್ದಾರೆ. ಬಂಧಿತ ಯುವಕ ಉತ್ತರಪ್ರದೇಶ ಮೂಲದವನು ಎಂದು ತಿಳಿದುಬಂದಿದೆ. ದುರ್ಗಮ್ಮ ದೇವಾಲಯದ ಬಳಿ ರೈಲ್ವೆ ಸೇತುವೆ ಮೇಲೆ ನಿಂತು ಡಾನ್ಸ್ ಮಾಡುತ್ತಿದ್ದ.
ಸಾರ್ವಜನಿಕ ಸ್ಥಳದಲ್ಲಿ ರೀಲ್ಸ್ ಮಾಡಿ ಹುಚ್ಚಾಟವಾಡುತ್ತಿದ್ದ ಹಿನ್ನೆಲೆಯಲ್ಲಿ ಯುವಕನನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.

