HomeKarnatakaBIG NEWS : ಆಸ್ತಿ ನೋಂದಣಿ ರದ್ದಾದರೆ ಮುದ್ರಾಂಕ, ನೋಂದಣಿ ಶುಲ್ಕ ಮರುಪಾವತಿ ಕಡ್ಡಾಯ ;...

BIG NEWS : ಆಸ್ತಿ ನೋಂದಣಿ ರದ್ದಾದರೆ ಮುದ್ರಾಂಕ, ನೋಂದಣಿ ಶುಲ್ಕ ಮರುಪಾವತಿ ಕಡ್ಡಾಯ ; ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು : ಆಸ್ತಿ ನೋಂದಣಿ ಪ್ರಕ್ರಿಯೆ ಪೂರ್ಣಗೊಳ್ಳುವ ಮುನ್ನವೇ ಖರೀದಿ-ಮಾರಾಟದ ವ್ಯವಹಾರ ರದ್ದಾದರೆ, ಮುಂಗಡವಾಗಿ ಪಾವತಿಸಿದ ಮುದ್ರಾಂಕ ಹಾಗೂ ನೋಂದಣಿ ಶುಲ್ಕವನ್ನು ಮರುಪಾವತಿಸಲೇಬೇಕು. ವ್ಯವಹಾರವೇ ರದ್ದಾಗಿರುವಾಗ ಸಾರ್ವಜನಿಕರ ಹಣವನ್ನು ಸರ್ಕಾರ ತನ್ನ ಬಳಿ ಇಟ್ಟುಕೊಳ್ಳುವ ಹಕ್ಕಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಹೌದು. ಆಸ್ತಿ ನೋಂದಣಿ ಪ್ರಕ್ರಿಯೆ ಪೂರ್ಣಗೊಳ್ಳುವ ಮುನ್ನವೇ ಖರೀದಿ-ಮಾರಾಟದ ವ್ಯವಹಾರ ರದ್ದಾದರೆ, ಮುಂಗಡವಾಗಿ ಪಾವತಿಸಿರುವ ಮುದ್ರಾಂಕ ಹಾಗೂ ನೋಂದಣಿ ಶುಲ್ಕವನ್ನು ಮರುಪಾವತಿಸಲು ಸಲ್ಲಿಸುವ ಮನವಿಯನ್ನು ನಿರಾಕರಿಸುವಂತಿಲ್ಲ. ವ್ಯವಹಾರವೇ ರದ್ದಾಗಿರುವಾಗ ಸಾರ್ವಜನಿಕರ ಹಣವನ್ನು ಸರ್ಕಾರ ತನ್ನ ಬಳಿ ಇಟ್ಟುಕೊಳ್ಳುವ ಹಕ್ಕಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಆಸ್ತಿ ಖರೀದಿದಾರರು ಹಾಗೂ ಮಾರಾಟಗಾರರಿಗೆ ಮಹತ್ವದ ಪರಿಹಾರ ನೀಡುವ ತೀರ್ಪಿನಲ್ಲಿ ಕರ್ನಾಟಕ ಹೈಕೋರ್ಟ್, ಆಸ್ತಿ ನೋಂದಣಿ ಪ್ರಕ್ರಿಯೆ ಪೂರ್ಣಗೊಳ್ಳುವ ಮುನ್ನವೇ ವ್ಯವಹಾರ ರದ್ದಾದರೆ, ಮುಂಗಡವಾಗಿ ಪಾವತಿಸಿರುವ ಮುದ್ರಾಂಕ ಹಾಗೂ ನೋಂದಣಿ ಶುಲ್ಕವನ್ನು ಮರುಪಾವತಿಸಲೇಬೇಕು ಎಂದು ಸ್ಪಷ್ಟಪಡಿಸಿದೆ.
ವಿಳಂಬದ ನೆಪವೊಡ್ಡಿ ಮರುಪಾವತಿ ಅರ್ಜಿಯನ್ನು ತಿರಸ್ಕರಿಸಿದ್ದ ಜಿಲ್ಲಾ ನೋಂದಣಾಧಿಕಾರಿಗಳ ಕ್ರಮವನ್ನು ಪ್ರಶ್ನಿಸಿ ಬೆಳಗಾವಿಯ ಗೋಪಾಲರಾವ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಚಿನ್ ಶಂಗದಮ್ ಅವರ ಪೀಠ ಈ ಮಹತ್ವದ ಆದೇಶ ನೀಡಿದೆ. ಜೊತೆಗೆ, ಅರ್ಜಿದಾರರ ಮನವಿಯನ್ನು ಮುಂದಿನ ಎಂಟು ವಾರಗಳೊಳಗೆ ಮರು ಪರಿಶೀಲಿಸಿ ಸೂಕ್ತ ಆದೇಶ ಹೊರಡಿಸುವಂತೆ ಸಂಬಂಧಿತ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನ್ಯಾಯಾಲಯವು ತನ್ನ ಆದೇಶದಲ್ಲಿ, ಕರ್ನಾಟಕ ಮುದ್ರಾಂಕ ಕಾಯ್ದೆ-1957ರ ಸೆಕ್ಷನ್ 52ಎ ಅಡಿಯಲ್ಲಿ ಮುದ್ರಾಂಕ ಹಾಗೂ ನೋಂದಣಿ ಶುಲ್ಕ ಮರುಪಾವತಿಗೆ ಅರ್ಜಿ ಸಲ್ಲಿಸಲು ಯಾವುದೇ ನಿರ್ದಿಷ್ಟ ಕಾಲಮಿತಿಯನ್ನು ನಿಗದಿಪಡಿಸಿಲ್ಲ ಎಂದು ಸ್ಪಷ್ಟಪಡಿಸಿದೆ. ಹೀಗಿರುವಾಗ, ಯಾವುದೇ ಕಾನೂನು ಅಥವಾ ಸರ್ಕಾರದ ಸುತ್ತೋಲೆಯ ಆಧಾರವಿಲ್ಲದೆ ಅಧಿಕಾರಿಗಳು ಸ್ವಯಂಪ್ರೇರಿತವಾಗಿ ಒಂದು ವರ್ಷದ ಕಾಲಮಿತಿಯನ್ನು ವಿಧಿಸಿರುವುದು ಕಾನೂನುಬಾಹಿರ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ಇದೇ ವೇಳೆ, ಕರ್ನಾಟಕ ನೋಂದಣಿ ನಿಯಮಗಳು-1965ರ ನಿಯಮ 193ರ ಪ್ರಕಾರ, ನೋಂದಣಿ ಪ್ರಕ್ರಿಯೆ ಅಧಿಕೃತವಾಗಿ ಪೂರ್ಣಗೊಳ್ಳುವ ಮುನ್ನ ಸಲ್ಲಿಸಿರುವ ದಾಖಲೆಗಳನ್ನು ಹಿಂದಕ್ಕೆ ಪಡೆಯುವ ಸಂಪೂರ್ಣ ಹಕ್ಕು ಅರ್ಜಿದಾರರಿಗೆ ಇದೆ ಎಂದು ನ್ಯಾಯಾಲಯ ತಿಳಿಸಿದೆ. “ವ್ಯವಹಾರವೇ ರದ್ದಾಗಿರುವಾಗ ಸಾರ್ವಜನಿಕರ ಹಣವನ್ನು ಸರ್ಕಾರ ತನ್ನ ಬಳಿ ಇಟ್ಟುಕೊಳ್ಳುವ ಹಕ್ಕಿಲ್ಲ. ಆದ್ದರಿಂದ ಮರುಪಾವತಿ ಮನವಿಯನ್ನು ಕೇವಲ ವಿಳಂಬದ ನೆಪವೊಡ್ಡಿ ತಿರಸ್ಕರಿಸುವುದು ನ್ಯಾಯಸಮ್ಮತವಲ್ಲ” ಎಂದು ಹೈಕೋರ್ಟ್ ತನ್ನ ಆದೇಶದಲ್ಲಿ ಸ್ಪಷ್ಟವಾಗಿ ಹೇಳಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular