ಸಹಜೀವನದಲ್ಲಿದ್ದು ಒಪ್ಪಿತ ದೈಹಿಕ ಸಂಬಂಧ ಹೊಂದಿದ ನಂತರ ಮದುವೆ ನಿರಾಕರಿಸಿದಲ್ಲಿ ಗಂಭೀರ ಅಪರಾಧವಲ್ಲ: ಹೈಕೋರ್ಟ್ ಆದೇಶ

ಲಕ್ನೋ: ಸಹಜೀವನದಲ್ಲಿದ್ದು, 4 ವರ್ಷ ಒಪ್ಪಿತ ದೈಹಿಕ ಸಂಬಂಧ ಹೊಂದಿದ ನಂತರ ಮದುವೆಗೆ ಪುರುಷ ನಿರಾಕರಿಸಿದಲ್ಲಿ ಅದು ಗಂಭೀರ ಅಪರಾಧವಾಗುವುದಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ.

ಸರಿ ತಪ್ಪು ನಿರ್ಧರಿಸುವ ಸಾಮರ್ಥ್ಯ ಹೊಂದಿದ ವಯಸ್ಕರಿಬ್ಬರು ಅನೇಕ ವರ್ಷ ಸಹಜೀವನ ನಡೆಸುತ್ತಿದ್ದರೆ ಅವರು ಅಂತಹ ಸಂಬಂಧವನ್ನು ಸ್ವಂತ ಇಚ್ಛೆಯಿಂದ ಆಯ್ಕೆ ಮಾಡಿಕೊಂಡಿರುತ್ತಾರೆ. ಅದರಿಂದ ಆಗುವ ಪರಿಣಾಮಗಳ ಬಗ್ಗೆ ಅವರಿಗೆ ಅರಿವು ಇರುತ್ತದೆ ಎಂದೇ ಊಹಿಸಬೇಕಾಗುತ್ತದೆ ಎಂದು ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ಅರುಣಕುಮಾರ್ ಸಿಂಗ್ ದೇಶವಾಲ್ ಅವರು ಇದ್ದ ನ್ಯಾಯಪೀಠ ಹೇಳಿದೆ.

ಸಹಜೀವನ ಸಂಗತಿಯಾಗಿದ್ದ ಪುರುಷನ ವಿರುದ್ಧ ಅತ್ಯಾಚಾರ ಆರೋಪ ಹೊರಿಸಿ ಮಹಿಳೆ ಸಲ್ಲಿಸಿದ ಮೇಲ್ಮನವಿಯನ್ನು ತಿರಸ್ಕರಿಸಿದ ನ್ಯಾಯಪೀಠ ಈ ರೀತಿ ಅಭಿಪ್ರಾಯ ವ್ಯಕ್ತಪಡಿಸಿದೆ.

ಮದುವೆ ಮಾಡಿಕೊಳ್ಳುವ ಭರವಸೆ ಇದ್ದ ಕಾರಣದಿಂದ ಒಪ್ಪಿತ ಸಂಬಂಧಕ್ಕೆ ಒಪ್ಪಿಗೆ ನೀಡಿದ್ದೆ ಎನ್ನುವ ವಾದವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಸೆ. 8ರಂದು ಅಲಹಾಬಾದ್ ಹೈಕೋರ್ಟ್ ಹೊರಡಿಸಿದ ಆದೇಶದಲ್ಲಿ ತಿಳಿಸಿದೆ.

ಒಪ್ಪಿತ ಸಂಬಂಧದಲ್ಲಿದ್ದ ಪುರುಷನ ವಿರುದ್ಧ ನೀಡಿದ್ದ ದೂರನ್ನು ಮಹೋಬಾ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ತಿರಸ್ಕರಿಸಿ ಕಳೆದ ವರ್ಷ ಆಗಸ್ಟ್ 17ರಂದು ಆದೇಶ ನೀಡಿದ್ದನ್ನು ಮಹಿಳೆ ಪ್ರಶ್ನಿಸಿ ಅಲಹಾಬಾದ್ ಹೈಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಸಹಜೀವನ ಬಳಿಕ ಮದುವೆಗೆ ನಿರಾಕರಣೆ ಅಪರಾಧವಲ್ಲ ಎಂದು ಹೇಳಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read