HomeLatest NewsBIG NEWS: ರಾಜ್ಯ ಸರ್ಕಾರದ ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿ ಅಳವಡಿಕೆಗೆ ಆದೇಶ

BIG NEWS: ರಾಜ್ಯ ಸರ್ಕಾರದ ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿ ಅಳವಡಿಕೆಗೆ ಆದೇಶ

ಬೆಂಗಳೂರು: ರಾಜ್ಯ ಸರ್ಕಾರದ ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿಯನ್ನು ಅಳವಡಿಸುವ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಆದೇಶಿಸಿದೆ.

ಯಾವುದೇ ಇಲಾಖೆಯಲ್ಲಿ ಕನಿಷ್ಠ 20 ಅಭ್ಯರ್ಥಿಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡುವ ಸಂದರ್ಭದಲ್ಲಿ ಮಾತ್ರ ಮೀಸಲಾತಿ ಜಾರಿಗೊಳಿಸತಕ್ಕದ್ದು ಎಂದು ಹೇಳಲಾಗಿದೆ.

ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡುವ ಸಂದರ್ಭದಲ್ಲಿ ಕರ್ನಾಟಕ ಅನುಸೂಚಿತ ಜಾತಿಗಳು, ಅನುಸೂಚಿತ ಬುಡಕಟ್ಟುಗಳು ಮತ್ತು ಇತರ ಹಿಂದುಳಿದ ವರ್ಗಗಳ(ನೇಮಕಾತಿ ಮುಂತಾದವುಗಳ ಮೀಸಲಾತಿ)(ತಿದ್ದುಪಡಿ) ಅಧಿನಿಯಮ, 2024ರ ಸೆಕ್ಷನ್ 4ರ ಸಬ್ ಸೆಕ್ಷನ್ “(5) ರಾಜ್ಯ ಸಿವಿಲ್ ಸೇವೆಗಳ ವೃಂದದಲ್ಲಿನ ಅಥವಾ ಸರ್ಕಾರಿ ವಲಯದ ಸಂಸ್ಥೆಗಳಲ್ಲಿನ ಯಾವುದೇ ಹುದ್ದೆಗೆ ನೇರ ನೇಮಕಾತಿ ಕೋಟಾದ ಎದುರು ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡುವಾಗ ಮೀಸಲಾತಿ ಕಲ್ಪಿಸಬೇಕೆಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅನುಸೂಚಿತ ಜಾತಿಗಳು, ಅನುಸೂಚಿತ ಬುಡಕಟ್ಟುಗಳು ಮತ್ತು ಇತರ ಹಿಂದುಳಿದ ವರ್ಗಗಳ ಸದಸ್ಯರಿಗೆ ನಿಯಮಿಸಬಹುದಾದ ಅಂಥ ವ್ಯಾಪ್ತಿ ಮತ್ತು ವಿಧಾನದಲ್ಲಿ ಸಾಕಷ್ಟು ಪ್ರಾತಿನಿಧ್ಯ ನೀಡಲಾಗಿದೆ ಎಂಬುದನ್ನು ಖಚಿತಪಡಿಸಿಕೊಳ್ಳತಕ್ಕದ್ದು:

ಹೊರಗುತ್ತಿಗೆ ಆಧಾರದ ಮೇಲಿನ ನೇಮಕಾತಿಯು ತಾತ್ಕಾಲಿಕ ಆಧಾರದಲ್ಲಿರತಕ್ಕದ್ದು ಮತ್ತು ಅದನ್ನು ನೇರ ನೇಮಕಾತಿ ಕೋಟಾದ ಎದುರು ಕ್ರಮಬದ್ಧಗೊಳಿಸತಕ್ಕದ್ದಲ್ಲ;

ಹೊರಗುತ್ತಿಗೆ ಆಧಾರದ ಮೇಲಿನ ನೇಮಕಾತಿಯು ನೇರ ನೇಮಕಾತಿ ಎದುರಾಗಿ ಮಂಜೂರಾದ ಹುದ್ದೆಗಳ ಶೇಕಡಾ ಹತ್ತರಷ್ಟನ್ನು ಮೀರತಕ್ಕದ್ದಲ್ಲ;

ರ್ನಾಟಕ ಅನುಸೂಚಿತ ಜಾತಿಗಳು, ಅನುಸೂಚಿತ ಬುಡಕಟ್ಟುಗಳು ಮತ್ತು ಇತರ ಹಿಂದುಳಿದ ವರ್ಗಗಳ (ನೇಮಕಾತಿಗಳ ಮುಂತಾದವುಗಳ ಮೀಸಲಾತಿ) (ತಿದ್ದುಪಡಿ) ಅಧಿನಿಯಮ, 2024ರ ಪ್ರಾರಂಭದ ದಿನಾಂಕದಂದು ಅಥವಾ ಅದಕ್ಕೆ ಮೊದಲು ಹೊರಗುತ್ತಿಗೆ ಆಧಾರದ ಮೇಲಿನ ನೇಮಕಾತಿಯು ಮಂಜೂರಾದ ಹುದ್ದೆಗಳ ಸಂಖ್ಯಾಬಲದ ಶೇಕಡಾ ಹತ್ತರಷ್ಟು ಮೀರಿದ್ದರೆ, ಆಗ ಅಂಥ ನೇಮಕಾತಿಗಳನ್ನು ಪ್ರತಿ ವರ್ಷ ಶೇಕಡಾ ಹತ್ತರಷ್ಟು ಕಡಿಮೆಗೊಳಿಸತಕ್ಕದ್ದು. ಇನ್ನುಳಿದಂತೆ ಉಲ್ಲೇಖಿತ ಸುತ್ತೋಲೆಯ ಎಲ್ಲಾ ಅಂಶಗಳು ಯಥಾವತ್ತಾಗಿ ಜಾರಿಯಲ್ಲಿರುತ್ತವೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular