HomeKarnatakaಕೇಂದ್ರೀಯ ವಿದ್ಯಾಲಯದಲ್ಲಿ 1 ರಿಂದ 5ನೇ ತರಗತಿ ಪ್ರವೇಶಕ್ಕೆ ನೋಂದಣಿ ಪ್ರಾರಂಭ

ಕೇಂದ್ರೀಯ ವಿದ್ಯಾಲಯದಲ್ಲಿ 1 ರಿಂದ 5ನೇ ತರಗತಿ ಪ್ರವೇಶಕ್ಕೆ ನೋಂದಣಿ ಪ್ರಾರಂಭ

ಚಿತ್ರದುರ್ಗ: ಚಿತ್ರದುರ್ಗದ ಕೇಂದ್ರೀಯ ವಿದ್ಯಾಲಯದಲ್ಲಿ 2026-27ನೇ ಶೈಕ್ಷಣಿಕ ಸಾಲಿನ 1 ರಿಂದ 5ನೇ ತರಗತಿಗಳ ಪ್ರವೇಶಕ್ಕಾಗಿ ಆನ್‍ಲೈನ್ ಮೂಲಕ ನೋಂದಣಿ ಪ್ರಕ್ರಿಯೆ ಆರಂಭವಾಗಿದ್ದು, ಅರ್ಹ ಅಭ್ಯರ್ಥಿಗಳಿಂದ ನೊಂದಣಿಗೆ ಆಹ್ವಾನಿಸಲಾಗಿದೆ. 

1ನೇ ತರಗತಿ ಪ್ರವೇಶಕ್ಕೆ ಆನ್‍ಲೈನ್ ಮೂಲಕ ನೋಂದಣಿ ಈಗಾಗಲೇ ಪ್ರಾರಂಭವಾಗಿದ್ದು, ಅರ್ಜಿ ಸಲ್ಲಿಸಲು ಏಪ್ರಿಲ್ 2 ರ ರಾತ್ರಿ 11:59 ಕೊನೆಯ ದಿನವಾಗಿದೆ. ಆಸಕ್ತರು  https://admission.kvs.gov.in ಜಾಲತಾಣದ ಮೂಲಕ ನೋಂದಣಿ ಮಾಡಿಕೊಳ್ಳಬಹುದು.

1ನೇ ತರಗತಿ ಪ್ರವೇಶ ಪಡೆಯಲು ಮಗುವಿಗೆ 31.03.2026ಕ್ಕೆ ಅನ್ವಯವಾಗುವಂತೆ ಕನಿಷ್ಠ 6 ವರ್ಷ ವಯಸ್ಸಾಗಿರಬೇಕು. ಎಲ್ಲಾ ತರಗತಿಗಳಿಗೂ ಇದೇ ದಿನಾಂಕದ ಆಧಾರದ ಮೇಲೆ ವಯಸ್ಸನ್ನು ಗಣನೆಗೆ ತೆಗೆದುಕೊಳ್ಳಲಾಗುತ್ತದೆ. ಸೀಟುಗಳ ಹಂಚಿಕೆಯು ಕೆವಿಎಸ್ ಪ್ರವೇಶ ಮಾರ್ಗಸೂಚಿ 2026-27ರ ಅನ್ವಯ ಇರಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

2 ರಿಂದ 5ನೇ ತರಗತಿಗಳ ಪ್ರವೇಶಕ್ಕಾಗಿ ಆಫ್‍ಲೈನ್ ವಿಧಾನದಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ. ಮಾ. 20 ರಿಂದ ಏ. 02 ರ ಸಂಜೆ 4 ಗಂಟೆಯ ಒಳಗೆ ಭರ್ತಿ ಮಾಡಿದ ಅರ್ಜಿಗಳನ್ನು ಚಿತ್ರದುರ್ಗದ ಸರ್ಕಾರಿ ವಿಜ್ಞಾನ ಮಹಾವಿದ್ಯಾಲಯದ ಸಮೀಪವಿರುವ ಕೇಂದ್ರೀಯ ವಿದ್ಯಾಲಯದ ಪ್ರಾಂಶುಪಾಲರ ಕಚೇರಿಗೆ ಸಲ್ಲಿಸಬೇಕು. 2 ರಿಂದ 5ನೇ ತರಗತಿವರೆಗೆ ಪ್ರವೇಶ ಮತ್ತು ನೋಂದಣಿ ಅರ್ಜಿಗಳ ವಿವರಗಳು  https://kvsangathan.nic.in/en/admission ವೆಬ್‍ಸೈಟ್‍ನಲ್ಲಿ ಲಭ್ಯವಿದ್ದು, 2026-27 ಪ್ರವೇಶ ವೇಳಾಪಟ್ಟಿಯ ಪ್ರಕಾರ ನೋಂದಣಿ ಮಾಡಬೇಕು.

ಅರ್ಜಿ ನಮೂನೆಯಲ್ಲಿ ತಪ್ಪು ಅಥವಾ ಸುಳ್ಳು ಮಾಹಿತಿ ನೀಡಿದಲ್ಲಿ ಪರಿಶೀಲನೆಯ ಸಮಯದಲ್ಲಿ ಅಂತಹ ಪ್ರವೇಶಾತಿಯನ್ನು ರದ್ದುಗೊಳಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಕಚೇರಿ ಸಮಯದಲ್ಲಿ ಪ್ರಾಂಶುಪಾಲರನ್ನು ಅಥವಾ ಪ್ರವೇಶ ಪ್ರಭಾರಿಯನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ಚಿತ್ರಕೃಪೆ: ಎಐ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular