ಹಾಸನಾಂಬ ಜಾತ್ರಾ ಮಹೋತ್ಸವ ಫಲಪುಷ್ಪ ಪ್ರದರ್ಶನ ಸ್ಪರ್ಧೆಗೆ ನೋಂದಣಿಗೆ ಆಹ್ವಾನ

ಶ್ರೀ ಹಾಸನಾಂಬ ದೇವಿ ದರ್ಶನ ಮತ್ತು ಶ್ರೀ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಆಚರಣೆ ಅಂಗವಾಗಿ ಅ.17 ರಿಂದ ಅ.20 ರವರೆಗೆ ಹಾಸನ ನಗರದ ಸಿಲ್ವರ್ ಜ್ಯೂಬಿಲಿ ಆರ್ಚರ್ಡ್ ಪಾರ್ಕ್ನಲ್ಲಿ ತೋಟಗಾರಿಕೆ ಇಲಾಖೆ, ಜಿಲ್ಲಾ ಪಂಚಾಯತ್, ಹಾಸನ ಹಾಗೂ ಹೇಮಾವತಿ ತೋಟಗಾರಿಕೆ ಸಂಘ, ಹಾಸನ ಇವರ ಸಂಯುಕ್ತಾಶ್ರಯದಲ್ಲಿ ಫಲಪುಷ್ಪ ಪ್ರದರ್ಶನವನ್ನು ಆಯೋಜಿಸಲಾಗುತ್ತಿದೆ.

ಫಲಪುಷ್ಪ ಪ್ರದರ್ಶನದ ಅಂಗವಾಗಿ ಸಾರ್ವಜನಿಕರಲ್ಲಿ ನೈಸರ್ಗಿಕ ಸಂಪನ್ಮೂಲಗಳು ಹಾಗೂ ಪರಿಸರ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸುವ ಹಾಗೂ ನಗರದ ಜನತೆಗೆ ತೋಟದ ಹವ್ಯಾಸವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಈ ಕೆಳಕಂಡ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.

ಮನೆ/ ಖಾಸಗಿ ಸಂಸ್ಥೆಗಳು ಹಾಗೂ ಸರ್ಕಾರಿ ಶಾಲೆ/ ಕಚÉÃರಿಗಳ ಅಂಗಳದಲ್ಲಿ ಅಲಂಕಾರಿಕ ತೋಟ ನಿರ್ವಹಣೆ ಸ್ಪರ್ಧೆಯನ್ನು Garden Maintence ಏರ್ಪಡಿಸಿದ್ದು, ಮನೆ, ಶಾಲೆ ಕಚÉÃರಿಗಳಿಗೆ ಭೇಟಿ ನೀಡಿ ತೀರ್ಪುನೀಡಲಾಗುವುದು.

ಪ್ಲಾಸ್ಟಿಕ್ ವಸ್ತುಗಳು, ಬಾಟಲಿಗಳು, ಟೈರುಗಳು ಇತ್ಯಾದಿ ಅನುಪಯುಕ್ತ ವಸ್ತುಗಳನ್ನು ಬಳಸಿ ಉದ್ಯಾನ ಸೌಂದರ್ಯೀಕರಣದ ಸ್ಪರ್ಧೆ (Garden beautification by using unused products) ಯನ್ನು ಏರ್ಪಡಿಸಿದ್ದು, ಅತ್ಯುತ್ತಮ ಪ್ರದರ್ಶಿಕೆಗಳನ್ನು ಫಲಪುಷ್ಪ ಪ್ರದರ್ಶನದಲ್ಲಿ ಪ್ರದರ್ಶಿಸಲಾಗುವುದು. ನಗರದ ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಪರಿಸರ ಸಂರಕ್ಷಣೆ ವಿಷಯಾಧಾರಿತ ಚಿತ್ರಕಲಾ ಸ್ಪರ್ಧೆ (Drawing Compitation) ಯನ್ನು ಆಯೋಜಿಸಲಾಗಿರುತ್ತದೆ.

ಆಸಕ್ತಿವುಳ್ಳ ಹಾಸನ ನಗರದ ನಾಗರೀಕರು, ಖಾಸಗಿ ಸಂಸ್ಥೆಗಳು, ಸರ್ಕಾರಿ ಶಾಲೆ/ ಕಾಲೇಜು ಹಾಗೂ ಸರ್ಕಾರಿ ಕಛೇರಿಗಳು ಹಾಗೂ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ದಿನಾಂಕ 10.10.2025 ರೊಳಗೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಜಿಲ್ಲಾ ಪಂಚಾಯತ್, ಹಾಸನ ತಾಲ್ಲೂಕು ರವರ ಕಚÉÃರಿಗೆ ಸಂಪರ್ಕಿಸಿ, ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಸಲ್ಲಿಸಿ ನೊಂದಾಯಿಸಿಕೊಳ್ಳಲು ಕೋರಿದೆ.

ಹೆಚ್ಚಿನ ವಿವರಗಳಿಗೆ ಈ ಕೆಳಕಂಡ ದೂರವಾಣಿ ಸಂಖ್ಯೆ- 9164100138, 9986024885, 8277097450, ಗಳನ್ನು ಸಂಪರ್ಕಿಸಲು ತೋಟಗಾರಿಕೆ ಉಪನಿರ್ದೇಶಕರು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read