HomeKarnataka‘ಯಶಸ್ವಿನಿ’ ಆರೋಗ್ಯ ಯೋಜನೆ ಸದಸ್ಯತ್ವ ನೋಂದಣಿ ಅವಧಿ ಮಾ. 31 ರವರೆಗೆ ವಿಸ್ತರಣೆ

‘ಯಶಸ್ವಿನಿ’ ಆರೋಗ್ಯ ಯೋಜನೆ ಸದಸ್ಯತ್ವ ನೋಂದಣಿ ಅವಧಿ ಮಾ. 31 ರವರೆಗೆ ವಿಸ್ತರಣೆ

ಸಹಕಾರಿಗಳಿಗಾಗಿ 2023-24ನೇ ಸಾಲಿಗೆ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯಡಿ ಹೊಸ ಸದಸ್ಯರನ್ನು ನೋಂದಾಯಿಸುವ ಅವಧಿಯನ್ನು ಮಾರ್ಚ್ 31ರ ವರೆಗೆ ವಿಸ್ತರಿಸಲಾಗಿದೆ.

ಚಿತ್ರದುರ್ಗ ಜಿಲ್ಲೆಯಲ್ಲಿ 2023-24ನೇ ಸಾಲಿಗೆ ಯಶಸ್ವಿನಿ ಸಹಕಾರ ಸದಸ್ಯರ ಆರೋಗ್ಯ ರಕ್ಷಣಾ ಯೋಜನೆಯು ಅನುಷ್ಠಾನಗೊಂಡಿದ್ದು, ಈ ಯೋಜನೆಯಡಿ ಸದಸ್ಯರನ್ನು ನೊಂದಾಯಿಸು ಪ್ರಕ್ರಿಯೆ ಈಗಾಗಲೇ ಪ್ರಾರಂಭವಾಗಿದೆ. ಈ ಪ್ರಯುಕ್ತ ಗ್ರಾಮೀಣ ಹಾಗೂ ನಗರ ಪ್ರದೇಶದ ಸಹಕಾರ ಸಂಘಗಳ ಸದಸ್ಯರು ಇನ್ನೂ ಹೆಚ್ಚಿನ ಸದಸ್ಯರನ್ನು ನೊಂದಾಯಿಸಿಕೊಳ್ಳಲು ಮಾರ್ಚ್ 31 ರವರೆಗೆ ನೋಂದಣಿ ಅವಧಿಯನ್ನು ವಿಸ್ತರಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಸದಾವಕಾಶವನ್ನು ಎಲ್ಲಾ ಗ್ರಾಮಾಂತರ ರೈತ ಸಹಕಾರಿ ಸದಸ್ಯರು ಹಾಗೂ ನಗರ ಸಹಕಾರಿ ಸದಸ್ಯರು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಸಹಕಾರ ಸಂಘಗಳ ಉಪನಿಬಂಧಕರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular