HomeLatest NewsGOOD NEWS: ಆತ್ಮಹತ್ಯೆ ಮಾಡಿಕೊಂಡ ರೈತರ ಮಕ್ಕಳ ಶಿಕ್ಷಣ ಶುಲ್ಕ ಮರುಪಾವತಿಗೆ ಅರ್ಜಿ

GOOD NEWS: ಆತ್ಮಹತ್ಯೆ ಮಾಡಿಕೊಂಡ ರೈತರ ಮಕ್ಕಳ ಶಿಕ್ಷಣ ಶುಲ್ಕ ಮರುಪಾವತಿಗೆ ಅರ್ಜಿ

ಬೆಂಗಳೂರು: ಬರದಿಂದಾಗಿ ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡ ರೈತರ ಮಕ್ಕಳ ಶಿಕ್ಷಣ ಶುಲ್ಕವನ್ನು ಮರುಪಾವತಿಸಲಾಗುವುದು.

2025 -26ನೇ ಸಾಲಿನ ಪ್ರವೇಶ ಶುಲ್ಕ ಮರುಪಾವತಿಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳಿಂದ ಕಾಲೇಜು ಶಿಕ್ಷಣ ಇಲಾಖೆ ಅರ್ಜಿ ಆಹ್ವಾನಿಸಿದೆ. ಸ್ನಾತಕೋತ್ತರ ಪದವಿ ಹಂತದವರೆಗೆ ಉಚಿತ ಶಿಕ್ಷಣ, ಹಾಸ್ಟೆಲ್ ಸೌಲಭ್ಯ ಅಥವಾ ತತ್ಸಮಾನ ಶಿಕ್ಷಣ ಶುಲ್ಕ ಮತ್ತು ವಸತಿ ವೆಚ್ಚವನ್ನು ಮರುಪಾವತಿಸಲಾಗುತ್ತಿದೆ. ಅಂತಹ ಕುಟುಂಬದ ಮಕ್ಕಳು ಪ್ರವೇಶದ ಸಂದರ್ಭದಲ್ಲಿ ಪಾವತಿಸಿರುವ ಶುಲ್ಕ ವಾಪಸ್ ಪಡೆಯಲು ಅರ್ಜಿ ಸಲ್ಲಿಸಬೇಕಿದೆ.

ಕಾಲೇಜು ಶಿಕ್ಷಣ ಇಲಾಖೆ ವ್ಯಾಪ್ತಿಯ ಸರ್ಕಾರಿ, ಅನುದಾನಿತ, ಅನುದಾನ ರಹಿತ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳು ಇಲಾಖೆಯ ವೆಬ್ಸೈಟ್ ನಿಂದ ಮರುಪಾವತಿ ಅರ್ಜಿ ಡೌನ್ಲೋಡ್ ಮಾಡಿಕೊಂಡು ಪ್ರಾಂಶುಪಾಲರಿಂದ ದೃಢೀಕರಿಸಿ ಅರ್ಜಿ ಸಲ್ಲಿಸಬಹುದಾಗಿದೆ. ಆತ್ಮಹತ್ಯೆ ಮಾಡಿಕೊಂಡ ರೈತರ ವಿವರಗಳ ಪ್ರತಿ ಸಲ್ಲಿಸಬೇಕು ಎಂದು ಕಾಲೇಜು ಶಿಕ್ಷಣ ಇಲಾಖೆ ಆಯುಕ್ತರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular