HomeKarnatakaಬಿಬಿಎಂಪಿ ಮಾಜಿ ಸದಸ್ಯೆ ರೇಖಾ ಕದಿರೇಶ್ ಹತ್ಯೆ ಪ್ರಕರಣ: 7 ಮಂದಿಗೆ ಜೀವಾವಧಿ ಶಿಕ್ಷೆ

ಬಿಬಿಎಂಪಿ ಮಾಜಿ ಸದಸ್ಯೆ ರೇಖಾ ಕದಿರೇಶ್ ಹತ್ಯೆ ಪ್ರಕರಣ: 7 ಮಂದಿಗೆ ಜೀವಾವಧಿ ಶಿಕ್ಷೆ

ಬೆಂಗಳೂರು: ಬಿಬಿಎಂಪಿ ಮಾಜಿ ಸದಸ್ಯೆ ರೇಖಾ ಕದಿರೇಶ್ ಹತ್ಯೆ ಪ್ರಕರಣದ 7 ಅಪರಾಧಿಗಳಿಗೆ ಬೆಂಗಳೂರಿನ 72ನೇ ಸಿಸಿಹೆಚ್ ನ್ಯಾಯಾಲಯ ಜೀವಾವಧಿ ಶಿಕ್ಷೆ ಮತ್ತು ದಂಡ ವಿಧಿಸಿ ಮಂಗಳವಾರ ಆದೇಶಿಸಿದೆ.

ಛಲವಾದಿ ಪಾಳ್ಯ ವಾರ್ಡ್ ಸದಸ್ಯರಾಗಿದ್ದ ರೇಖಾ ಕದಿರೇಶ್ ಅವರನ್ನು 2021ರ ಜೂನ್ ನಲ್ಲಿ ಹತ್ಯೆ ಮಾಡಲಾಗಿತ್ತು. ಪೀಟರ್(49), ಸೂರ್ಯ(23), ಸ್ಟೀಫನ್(24), ಪುರುಷೋತ್ತಮ(25), ಅಜಯ್(24), ಅರುಣ್ ಕುಮಾರ್(39), ಸೆಲ್ವರಾಜ್(36) ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಪ್ರಕರಣದ ಮತ್ತೊಬ್ಬ ಅಪರಾಧಿ ಮಾಲಾ(63) ವಿಚಾರಣೆಯ ಸಂದರ್ಭದಲ್ಲಿ ಮೃತಪಟ್ಟಿದ್ದರು.

ಕಾಟನ್ ಪೇಟೆ ಠಾಣೆ ಪೊಲೀಸರು ಆರೋಪಿಗಳನ್ನು ಬಂಧಿಸಿ ತನಿಖೆ ನಡೆಸಿ 2021ರ ಸೆಪ್ಟೆಂಬರ್ ನಲ್ಲಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಾದ ಪ್ರತಿವಾದ ಆಲಿಸಿದ ನ್ಯಾಯಾಲಯ ಆರೋಪಿಗಳು ಕೃತ್ಯ ಎಸಗಿರುವುದು ಸಾಬೀತಾಗಿದೆ ಎಂದು ತೀರ್ಮಾನಿಸಿ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular