ಬೆಂಗಳೂರು : ಬಿಗ್ ಬಾಸ್ ವಿಜೇತ ಗಿಲ್ಲಿ ನಟ ನಾಯಕನಾಗಿ ನಟಿಸಿರುವ ಬಹುನಿರೀಕ್ಷಿತ ‘ಸೂಪರ್ ಹಿಟ್’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಇತ್ತೀಚೆಗೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡ ಟೀಸರ್ ಬಿಡುಗಡೆ ಮಾಡುವ ಮೂಲಕ ಫೆಬ್ರವರಿ 27 ರಂದು ಸಿನಿಮಾ ತೆರೆಗೆ ಬರಲಿದೆ ಎಂದು ಅಧಿಕೃತವಾಗಿ ಘೋಷಿಸಿದೆ.
ವಿ. ನಾಗೇಂದ್ರ ಪ್ರಸಾದ್ ಅವರ ಸಹೋದರ ವಿಜಯಾನಂದ್ ಅವರು ಈ ಚಿತ್ರವನ್ನು ನಿರ್ದೇಶಿಸಿದ್ದಾರೆ.ನಟ ಹಾಗೂ ಗೌರವ್ ಶೆಟ್ಟಿ ನಾಯಕರಾಗಿ ನಟಿಸಿದ್ದು, ಶ್ವೇತಾ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಸಾಧು ಕೋಕಿಲ, ಪ್ರಮೋದ್ ಶೆಟ್ಟಿ ಸೇರಿದಂತೆ ದೊಡ್ಡ ತಾರಾಬಳಗವೇ ಚಿತ್ರದಲ್ಲಿದೆ.: ವಿಶೇಷವೆಂದರೆ, ಸಿನಿಮಾ ಬಿಡುಗಡೆಗೂ ಮುನ್ನವೇ ದೊಡ್ಡ ಮೊತ್ತಕ್ಕೆ ಓಟಿಟಿ ಹಕ್ಕುಗಳು ಮಾರಾಟವಾಗಿರುವುದು ಚಿತ್ರತಂಡದ ವಿಶ್ವಾಸವನ್ನು ಹೆಚ್ಚಿಸಿದೆ.ಡಾ. ವಿ. ನಾಗೇಂದ್ರ ಪ್ರಸಾದ್ ಅವರು ಸಾಹಿತ್ಯ ಮತ್ತು ಸಂಗೀತ ನೀಡುವ ಜೊತೆಗೆ ಪ್ರಮುಖ ಪಾತ್ರವೊಂದರಲ್ಲಿ ನಟಿಸಿದ್ದಾರೆ.ಚಿತ್ರವು ಕಾಮಿಡಿ ಸಸ್ಪೆನ್ಸ್ ಥ್ರಿಲ್ಲರ್ ಜಾನರ್ನಲ್ಲಿದ್ದು, ಪ್ರೇಕ್ಷಕರಲ್ಲಿ ಭಾರೀ ಕುತೂಹಲ ಮೂಡಿಸಿದೆ. ರಾಜ್ಯಾದ್ಯಂತ ಸುಮಾರು 200ಕ್ಕೂ ಹೆಚ್ಚು ಥಿಯೇಟರ್ಗಳಲ್ಲಿ ಸಿನಿಮಾ ಅದ್ದೂರಿಯಾಗಿ ತೆರೆಕಾಣಲಿದೆ.
ಫೆಬ್ರವರಿ 27 ರಂದು ಕರ್ನಾಟಕದಾದ್ಯಂತ ಸಿನಿಮಾ ರಿಲೀಸ್ ಆಗಿದ್ದು, ಬಿಗ್ ಬಾಸ್ ಗೆದ್ದ ನಂತರ ಗಿಲ್ಲಿ ನಟನಿಗೆ ಸಿಕ್ಕ ಜನಪ್ರಿಯತೆ ಸಿನಿಮಾಗೆ ಪ್ಲಸ್ ಪಾಯಿಂಟ್ ಆಗಿದೆ. ವಿಜಯಲಕ್ಷ್ಮಿ ಎಂಟರ್ ಪ್ರೈಸಸ್ ಬ್ಯಾನರ್ ಅಡಿಯಲ್ಲಿ ಜಿ. ಉಮೇಶ್ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ಚಿತ್ರದ ಹೆಸರೇ ಸೂಪರ್ ಹಿಟ್ ಆಗಿದ್ದು, ಸಿನಿಮಾ ಸ್ಯಾಂಡಲ್ ವುಡ್ ನಲ್ಲಿ ಹೇಗೆ ಕಮಾಲ್ ಮಾಡಲಿದೆ ಎಂಬುದನ್ನು ಕಾದು ನೋಡಬೇಕಾಗಿದೆ.

