HomeKarnatakaಶಿಕ್ಷಕರ ಪರಿಷ್ಕ್ರತ ವರ್ಗಾವಣೆಯ ವೇಳಾಪಟ್ಟಿ ಬಿಡುಗಡೆ

ಶಿಕ್ಷಕರ ಪರಿಷ್ಕ್ರತ ವರ್ಗಾವಣೆಯ ವೇಳಾಪಟ್ಟಿ ಬಿಡುಗಡೆ

 2022-23ನೇ ಸಾಲಿನ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರನ್ನು ಒಳಗೊಂಡಂತೆ ಪ್ರಾಥಮಿಕ ಶಾಲಾ ಶಿಕ್ಷಕರು ಮತ್ತು ಪ್ರೌಢ ಶಿಕ್ಷಕರು/ ತತ್ಸಮಾನ ವೃಂದದ ಶಿಕ್ಷಕರು ಹಾಗೂ ಸರ್ಕಾರಿ ಪ್ರೌಢ ಶಾಲಾ ಮುಖ್ಯ ಶಿಕ್ಷಕರು, ತತ್ಸಮಾನ ವೃಂದದ ಹೆಚ್ಚುವರಿ ಕೌನ್ಸಿಲಿಂಗ್ ಪ್ರಕ್ರಿಯೆ ಪ್ರಾರಂಭಿಸಲಾಗಿದ್ದು, ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ 2022-23ನೇ ಸಾಲಿನ ವರ್ಗಾವಣೆ ಸಂಬಂಧ ಪರಿಷ್ಕ್ರತ  ವರ್ಗಾವಣಾ ವೇಳಾ ಪಟ್ಟಿ ಬಿಡುಗಡೆ ಮಾಡಲಾಗಿದೆ.

ಪ್ರಥಮ ಹಂತದಲ್ಲಿ ಹೆಚ್ಚುವರಿ ಶಿಕ್ಷಕರ ಪಟ್ಟಿಯನ್ನು ಇಲಾಖಾ ವೆಬ್‍ಸೈಟ್‍ನಲ್ಲಿ ಮತ್ತು ಸಂಬಂಧಿಸಿದ ಬ್ಲಾಕ್‍ಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಪ್ರಕಟಿಸಲಾಗಿದೆ. ಸಂಬಂಧಿಸಿದ ಶಿಕ್ಷಕರು ಪ್ರಕಟಿಸಿರುವ ಪಟ್ಟಿ ಪರಿಶೀಲಿಸಿಕೊಂಡು ಆಕ್ಷೇಪಣೆಗಳಿದ್ದಲ್ಲಿ ಜೂ.10 ರೊಳಗೆ ಆನ್‍ಲೈನ್ ಮೂಲಕ ಆಯಾಯ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular