HomeKarnatakaರಾಜ್ಯದಲ್ಲಿ ತೀವ್ರ ಬರಗಾಲದಿಂದ 5.11 ಲಕ್ಷ ಎಕರೆ ತೋಟಗಾರಿಕೆ ಬೆಳೆ ಹಾನಿ: ರೈತರಿಗೆ ಪರಿಹಾರ

ರಾಜ್ಯದಲ್ಲಿ ತೀವ್ರ ಬರಗಾಲದಿಂದ 5.11 ಲಕ್ಷ ಎಕರೆ ತೋಟಗಾರಿಕೆ ಬೆಳೆ ಹಾನಿ: ರೈತರಿಗೆ ಪರಿಹಾರ

ಬೆಂಗಳೂರು: ರಾಜ್ಯದಲ್ಲಿ ತೀವ್ರ ಬರಗಾಲದಿಂದ 5.11 ಲಕ್ಷಕ್ಕೂ ಅಧಿಕ ಎಕರೆ ಪ್ರದೇಶದಲ್ಲಿ ತೋಟಗಾರಿಕೆ ಬೆಳೆ ಹಾನಿಯಾಗಿದೆ ಎಂದು ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ತಿಳಿಸಿದ್ದಾರೆ.

ವಿಧಾನ ಪರಿಷತ್ ನಲ್ಲಿ ಜೆಡಿಎಸ್ ಸದಸ್ಯ ಟಿ.ಎ. ಶರವಣ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, 5.11 ಲಕ್ಷಕ್ಕೂ ಅಧಿಕಾರಿ ಪ್ರದೇಶದ ತೋಟಗಾರಿಕೆ ಬೆಳೆ ಹಾನಿಯಾಗಿದ್ದು, 30.24 ಲಕ್ಷ ರೈತರಿಗೆ ತಲಾ 2,000 ರೂ. ಪಾವತಿಸಲಾಗಿದೆ ಎಂದು ತಿಳಿಸಿದ್ದಾರೆ.

ಗದಗದಲ್ಲಿ 1,63,103, ಬಾಗಲಕೋಟೆ 97,908, ಬೆಳಗಾವಿ 29,195, ಬಳ್ಳಾರಿ 14,125, ಚಿಕ್ಕಮಗಳೂರು 16,183, ಚಿತ್ರದುರ್ಗ 11,810, ಧಾರವಾಡ 55,294 ಸೇರಿ 5,11,208 ಎಕರೆ ತೋಟಗಾರಿಕೆ ಬೆಳೆ ಹಾನಿಯಾಗಿದ್ದು, ರೈತರಿಗೆ ತಾತ್ಕಾಲಿಕವಾಗಿ 2000 ರೂ. ಪರಿಹಾರ ನೀಡಿದ್ದು, ಕೇಂದ್ರದಿಂದ ಪರಿಹಾರ ಹಣ ಬಂದ ಕೂಡಲೇ ವಿತರಿಸಲಾಗುವುದು ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular