ಮಹೇಶ್ ಶೆಟ್ಟಿ ತಿಮರೋಡಿ, ಮಟ್ಟಣ್ಣನವರ್ ಟೀಮ್ ಗೆ ರಿಲೀಫ್: ತನಿಖೆಗೆ ತಾತ್ಕಾಲಿಕ ತಡೆ ನೀಡಿ ಹೈಕೋರ್ಟ್ ಆದೇಶ

ಬೆಂಗಳೂರು: ಧರ್ಮಸ್ಥಳ ಬುರುಡೆ ಪ್ರಕರಣ ವಿಚಾರವಾಗಿ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ಟಿ. ಜಯಂತ್ ಮತ್ತು ವಿಠ್ಠಲ್ ಗೌಡ ಅವರಿಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ.

ಧರ್ಮಸ್ಥಳ ಪೊಲೀಸ್ ಠಾಣೆಯ ದಾಖಲಾದ ಎಫ್ಐಆರ್ 39/2025 ರದ್ದುಪಡಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ಅವರಿದ್ದ ಪೀಠ ಪರ, ವಿರೋಧ ಆಲಿಸಿ ಪ್ರಕರಣದ ತನಿಖೆಗೆ ನವೆಂಬರ್ 12ರ ವರೆಗೆ ತಡೆ ನೀಡಿ ಆದೇಶಿಸಿದೆ.

ಅರ್ಜಿದಾರರ ಪರವಾಗಿ ವಕೀಲ ಬಾಲನ್ ವಾದ ಮಂಡಿಸಿದ್ದಾರೆ. ಈಗಾಗಲೇ ಒಂಬತ್ತು ಬಾರಿ ನೋಟಿಸ್ ನೀಡಿ ವಿಚಾರಣೆ ನಡೆಸಲಾಗಿದೆ. ಅವರನ್ನು ಆರೋಪಿಗಳೆಂದು ಉಲ್ಲೇಖಿಸಿಲ್ಲ. ಖುದ್ದಾಗಿ ನೋಟಿಸ್ ಜಾರಿ ಮಾಡದೆ ವಾಟ್ಸಾಪ್, ಇ-ಮೇಲ್ ಗಳಲ್ಲಿ ನೋಟಿಸ್ ನೀಡಲಾಗಿದೆ. ಬಿಎನ್ಎಸ್ಎಸ್ ಸೆಕ್ಷನ್ 35(3) ರ ಅಡಿಯಲ್ಲಿ ಸಮನ್ಸ್ ನೀಡಿರುವುದು ಕಾನೂನುಬಾಹಿರವಾಗಿದೆ. ನಾವು ಆರೋಪಿಗಳು ಅಲ್ಲ, ಸಾಕ್ಷಿಗಳು ಅಲ್ಲ ಎಂದು ವಾದ ಮಂಡಿಸಿದ್ದಾರೆ.

ರಾಜಕೀಯ ಧಾರ್ಮಿಕ ಸಂಘಟನಾತ್ಮಕ ವೈರತ್ವದಿಂದ ನೋಟಿಸ್ ನೀಡಲಾಗಿದೆ. ವಿಚಾರಣೆಯ ಹೆಸರಲ್ಲಿ ಬೆಳಗ್ಗೆಯಿಂದ ಮಧ್ಯರಾತ್ರಿಯವರೆಗೆ ಕೂರಿಸಲಾಗುತ್ತದೆ. ಈಗಾಗಲೇ 150 ಗಂಟೆಗೂ ಹೆಚ್ಚು ಕಾಲ ಅರ್ಜಿದಾರರ ವಿಚಾರಣೆ ನಡೆಸಲಾಗಿದೆ. ಆರಂಭದಲ್ಲಿ ದಾಖಲಿಸಿಕೊಂಡ ಕೇಸ್ ಗೆ ಬೇರೆ ಸೆಕ್ಷನ್ ಗಳನ್ನು ಸೇರಿಸಲಾಗಿದೆ ಎಂದು ವಾದ ಮಂಡಿಸಿದ್ದಾರೆ.

ಇವರ ಪ್ರಚೋದನೆ ಮೇಲೆಯೇ ಚಿನ್ನಯ್ಯ ದೂರು ನೀಡಿದ್ದಾನೆ. ನಂತರ 164 ಹೇಳಿಕೆ ನೀಡಿ ಅರ್ಜಿದಾರರ ಮೇಲೆ ಆರೋಪ ಮಾಡಿದ್ದಾನೆ. ಧರ್ಮಸ್ಥಳ ಗ್ರಾಮದ 20 ಸ್ಥಳಗಳಲ್ಲಿ ಅಗೆದು ಪರಿಶೀಲನೆ ನಡೆಸಿ ಈಗ ಆರೋಪಿಗಳನ್ನಾಗಿಸಿ ಇವರಿಗೆ ನೋಟಿಸ್ ನೀಡಲಾಗಿದೆ ಎಂದು ಎಸ್ಐಟಿ ಪರ ಎಸ್.ಪಿ.ಪಿ. ಬಿ.ಎನ್. ಜಗದೀಶ್ ವಾದ ಮಂಡಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read