ಧರ್ಮಸ್ಥಳದ ಸೌಜನ್ಯ ಕುರಿತು ವಿಡಿಯೋ ಮಾಡಿದ ಯೂಟ್ಯೂಬರ್ ಗೆ ರಿಲೀಫ್: ಪೊಲೀಸ್ ನೋಟಿಸ್ ಗೆ ಹೈಕೋರ್ಟ್ ತಡೆಯಾಜ್ಞೆ

ಬೆಂಗಳೂರು: ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಕುರಿತಾಗಿ ವಿಡಿಯೋ ಮಾಡಿದ್ದ ಯೂಟ್ಯೂಬರ್ ಎಂ.ಡಿ. ಸಮೀರ್ ವಿರುದ್ಧದ ಪೊಲೀಸರ ನೋಟಿಸ್ ಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.

ವಿಚಾರಣೆಗೆ ಹಾಜರಾಗುವಂತೆ ಜಾರಿ ಮಾಡಿದ್ದ ನೋಟಿಸ್ ಪ್ರಶ್ನಿಸಿ ಸಮೀರ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ನ್ಯಾಯಪೀಠ ಈ ಆದೇಶ ನೀಡಿ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿದೆ.

ಯೂಟ್ಯೂಬರ್ ಸಮೀರ್ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದ ವಿಡಿಯೋ ಸಂಬಂಧಿಸಿದಂತೆ ಬಳ್ಳಾರಿಯ ಕೌಲ್ ಬಜಾರ್ ಪೊಲೀಸ್ ಠಾಣೆಯಲ್ಲಿ ಧಾರ್ಮಿಕ ನಂಬಿಕೆ ಆಚರಣೆ, ಉದ್ದೇಶಪೂರ್ವಕವಾಗಿ ಅವಮಾನಿಸಿದ್ದ ಕಾಯ್ದೆಯಡಿ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read